ಆಂದ್ರ ಪ್ರದೇಶ: ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಂಡ ಪವನ್ ಕಲ್ಯಾಣ್ ಪಕ್ಷ!

0
19

ನ್ಯೂಸ್ ಕನ್ನಡ ವರದಿ: (16.01.2020): ತೆಲುಗು ಚಿತ್ರರಂಗದಲ್ಲಿ ಹಲವಾರು ಸಿನಿಮಾಗಳನ್ನು ಮಾಡುವ ಮೂಲಕ ಖ್ಯಾತ ನಟರಾಗಿ ರೂಪುಗೊಂಡಿದ್ದ ಪವನ್ ಕಲ್ಯಾಣ್ ಸ್ವತಂತ್ರ ಪಕ್ಷವೊಂದನ್ನು ಸ್ಥಾಪಿಸಿ ರಾಜಕೀಯದ ಅಖಾಡಕ್ಕಿಳಿದಿದ್ದರು. ಇದೀಗ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷವು ಭಾರತೀಯ ಜನತಾ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ.

ವಿಜಯವಾಡದಲ್ಲಿ ಹಮ್ಮಿಕೊಂಡಿದ್ದ ಸಭೆಯ ನಂತರ ಜನಸೇನಾ ಮುಖ್ಯಸ್ಥ ಪವನ್‌ ಕಲ್ಯಾಣ್‌ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕನ್ನ ಲಕ್ಷ್ಮಿನಾರಾಯಣ ಈ ತೀರ್ಮಾನ ಪ್ರಕಟಿಸಿದ್ದಾರೆ. ಈ ಮೈತ್ರಿ ಕೂಟವು ಆಂಧ್ರಪ್ರದೇಶದಲ್ಲಿ ಮೂರನೇ ಪರ್ಯಾಯ ಶಕ್ತಿಯಾಗಿ ರೂಪುಗೊಳ್ಳಲಿದೆ ಎಂಬ ಆಶಯವನ್ನೂ ಅವರು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here