ಉಪಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದರೆ ಕಾಂಗ್ರೆಸ್‌ಗೆ ಸೇರ್ಪಡೆ: ಬಿಜೆಪಿ ಮಾಜಿ ಶಾಸಕ ಹೊಸಬಾಂಬ್!

0
644

ನ್ಯೂಸ್ ಕನ್ನಡ ವರದಿ: ಕಾಗವಾಡ ಕ್ಷೇತ್ರದ ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಗೆ ಬಿಜೆಪಿ ಟಿಕೆಟ್ ನೀಡುವ ಹಿನ್ನೆಲೆಯಲ್ಲಿ, ಬಿಜೆಪಿ ಮಾಜಿ ಶಾಸಕ ಮತ್ತು ಕಗವಾಡ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ರಾಜು ಕಾಗೆ ಬಿಜೆಪಿ ವಿರುದ್ಧ ಗರಂ ಆಗಿದ್ದಾರೆ.

ರಾಜು ಕಾಗೆ ಅವರಿಗೆ ಕಾಡಾ ನಿಗಮ ಮಂಡಳಿ ಸ್ಥಾನ ನೀಡಲಾಗಿತ್ತು. ಆದರೆ ರಾಜು ಕಾಗೆ ಈಗ ಅಸಮಾಧಾನ ಹೊರಹಾಕಿದ್ದು, ಕಾಡಾ ನಿಮಗ ಮಂಡಳಿ ಸ್ಥಾನ ನನ್ನ ಯೋಗ್ಯತೆಗೆ ತಕ್ಕ ಸ್ಥಾನ ಅಲ್ಲ. ನಾನು ನಾಲ್ಕು ಬಾರಿ ಶಾಸಕನಾಗಿ ಕೆಲಸ ಮಾಡಿದ ವ್ಯಕ್ತಿ. ಜಿಲ್ಲಾ ಪಂಚಾಯತ್ ಸದಸ್ಯನಿಗೆ ನೀಡುವ ಸ್ಥಾನವನ್ನು ನನಗೆ ನೀಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನನಗೆ ಬಿಜೆಪಿಯಿಂದ ಟಿಕೆಟ್ ಕೊಡಿ, ಇಲ್ಲವಾದರೆ ಕಾಂಗ್ರೆಸ್ ಗೆ ಹೋಗುತ್ತೇನೆ. ಈಗಾಗಲೇ ಕಾಂಗ್ರೆಸ್ ನವರು ಸಂಪರ್ಕ ಮಾಡಿದ್ದಾರೆ. ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ್ದೇನೆ.

LEAVE A REPLY

Please enter your comment!
Please enter your name here