‘ನೀವು ಯಾವ ಬಟನ್ ಒತ್ತಿದರೂ ಬಿಜೆಪಿಗೆ ಮತ ಬೀಳುತ್ತದೆ’ ಎಂಬ ಬಿಜೆಪಿಗರ ಹೇಳಿಕೆಗೆ ತಿರುಗೇಟು ನೀಡಿದ ರಾಹುಲ್

0
296

ನ್ಯೂಸ್ ಕನ್ನಡ ವರದಿ: ಹರ್ಯಾಣದ ಅಸ್ಸಾಂಧ್ ಕ್ಷೇತ್ರದ ಶಾಸಕ ಮತ್ತು ಈ ಬಾರಿಯ ಬಿಜೆಪಿ ಅಭ್ಯರ್ಥಿಯಾಗಿರುವ ಬಕ್ಷೀಶ್ ಸಿಂಗ್ ವಿರ್ಕ್ ಮತದಾರರನ್ನುದ್ದೇಶಿಸಿ ಮಾತನಾಡುತ್ತಾ, “ನೀವು ಯಾವ ಬಟನ್ ಒತ್ತಿದರೂ ಬಿಜೆಪಿಗೆ ಮತ ಬೀಳುತ್ತದೆ” ಎಂಬ ಹೇಳಿಕೆ ವಿವಾದ ಸೃಷ್ಟಿಸಿರುವ ನಡುವೆ ಈ ಬಗ್ಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ ಬಕ್ಷೀಶ್ ರ ವಿಡಿಯೋ ಶೇರ್ ಮಾಡಿರುವ ರಾಹುಲ್ ಗಾಂಧಿ, “ಇವರು ಬಿಜೆಪಿ ಅತ್ಯಂತ ಪ್ರಾಮಾಣಿಕ ವ್ಯಕ್ತಿ” ಎಂದು ಹೇಳಿದ್ದಾರೆ.

ವಿವಾದಾತ್ಮಕ ಹೇಳಿಕೆಗಾಗಿ ಚುನಾವಣಾ ಆಯೋಗವು ಬಕ್ಷೀಶ್ ವಿರುದ್ಧ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

LEAVE A REPLY

Please enter your comment!
Please enter your name here