ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ ಪತಿ ನಿಧನ: ತಬ್ಬಿ ಸಾಂತ್ವನ ಹೇಳಿದ ರಾಹುಲ್ ಗಾಂಧಿ

0
734

ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸದಲ್ಲಿರುವ ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಾಹುಲ್ ಗಾಂಧಿ ಮಾಜಿ ಕೇಂದ್ರ ಸಚಿವೆ ಮಾರ್ಗರೇಟ್‌ ಆಳ್ವಾ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ನಿನ್ನೆ ಮಾರ್ಗರೇಟ್‌ ಆಳ್ವಾ ಪತಿ ನಿರಂಜನ್‌ ಥಾಮಸ್​ ಬೆಂಗಳೂರಿನಲ್ಲಿ ವಿಧಿವಶರಾಗಿದ್ದರು.

ಇಂದು ನಿರಂಜನ್‌ ಅವರ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ರಾಹುಲ್​ಗಾಂಧಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್‌ ಅಂತಿಮ ದರ್ಶನ ಪಡೆದರು.

LEAVE A REPLY

Please enter your comment!
Please enter your name here