ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಅಂಬೇಡ್ಕರ್ ಭಾವಚಿತ್ರವಿಟ್ಟು ಗಣರಾಜ್ಯೋತ್ಸವ ಆಚರಿಸುವಂತೆ ಸೂಚಿಸಿದ ರಾಜ್ಯ ಸರ್ಕಾರ

0
49

ನ್ಯೂಸ್ ಕನ್ನಡ ವರದಿ: ಜನವರಿ 26ರ ಗಣರಾಜ್ಯೋತ್ಸವದಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು, ಆಚರಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿದೆ. ಈ ಮೂಲಕ ಸಂವಿಧಾನದ ಪಿತಾಮಹನ ಭಾವಚಿತ್ರ ಇಟ್ಟು ಗಣರಾಜ್ಯೋತ್ಸವವನ್ನು ಆಚರಿಸುವಂತೆ ಕಟ್ಟು ನಿಟ್ಟಾಗಿ ಸೂಚಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಸುತ್ತೋಲೆಯನ್ನು ಹೊರಡಿಸಿದ್ದು, ಜನವರಿ 26ರಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಆಚರಿಸಲಾಗುತ್ತಿರುವ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನದ ಪಿತಾಮಹ ಭಾರತರತ್ನ ಡಾ.ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಟ್ಟು, ಸಮಾರಂಭವನ್ನು ಆಚರಿಸುವಂತೆ ಸೂಚಿಸಿದೆ.

ಈ ಸುತ್ತೋಲೆಯನ್ನು ಶಿಕ್ಷಣ ಇಲಾಖೆಯ ಆಯುಕ್ತರಿಗೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ, ಅಪರ ಆಯುಕ್ತರಿಗೆ, ಎಲ್ಲಾ ಉಪ ನಿರ್ದೇಶಕರಿಗೆ, ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹೊರಡಿಸಿದೆ.‌ ಅಲ್ಲದೇ ಕಡ್ಡಾಯವಾಗಿ ಡಾ.ಬಿಆರ್ ಅಂಬೇಡ್ಕರ್ ಭಾವಚಿತ್ರವಿಟ್ಟು ಗಣರಾಜ್ಯೋತ್ಸವ ಆಚರಿಸುವಂತೆ ಖಡಕ್ ಆಗಿ ಸೂಚಿಸಿದೆ.

LEAVE A REPLY

Please enter your comment!
Please enter your name here