ಅಂಫಾನ್ ಚಂಡಮಾರುತಕ್ಕೆ 72 ಮಂದಿ ಬಲಿ; ಮಮತ ಬ್ಯಾನರ್ಜಿ: ವೈಮಾನಿಕ ಸಮೀಕ್ಷೆಗೆ ಮುಂದಾದ ಕೇಂದ್ರ

0
49

ನ್ಯೂಸ್ ಕನ್ನಡ ವರದಿ: ಅಂಫಾನ್ ಚಂಡಮಾರುತ ಅಬ್ಬರಕ್ಕೆ ಪಶ್ಚಿಮ ಬಂಗಾಳದಲ್ಲಿ 72 ಮಂದಿ ಬಲಿಯಾಗಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಅಂಫಾನ್ ಚಂಡಮಾರುತದ ಅಬ್ಬರ ತೀವ್ರವಾಗಿದ್ದು, ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಕರಾವಳಿ ತೀರ ಪ್ರದೇಶದಲ್ಲಿ ಸುಮಾರು 6 ಸಾವಿರ ಮನೆಗಳು ಧರೆಗುರುಳಿವೆ. ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಕೊಚ್ಚಿ ಹೋಗಿವೆ. ಅಂಪಾಣ್ ಚಂಡಮಾರುತದಿಂದ ರಾಜ್ಯಕ್ಕೆ 1 ಲಕ್ಷ ಕೋಟಿ ರೂ. ನಷ್ಟವಾಗಿದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಚಂಡಮಾರುತದ ವಿರುದ್ಧದ ಹೋರಾಟದಲ್ಲಿ ಪಶ್ಚಿಮ ಬಂಗಾಳ ಏಕಾಂಗಿಯಾಗಿಲ್ಲ. ಇಡೀ ದೇಶವೇ ಜೊತೆಗಿದೆ. ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

ಇನ್ನು ಇಂದು ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ವೈಮಾನಿಕ ಸಮೀಕ್ಷೆ ನಡೆಸುವುದಾಗಿ ಅವರು ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here