ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ: ತೀವ್ರ ನಿಗಾ!

0
449

ನ್ಯೂಸ್ ಕನ್ನಡ ವರದಿ: (17.8.2019): ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದಲ್ಲಿ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದ ಬಿಜೆಪಿ ಪಕ್ಷದ ಹಿರಿಯ ನಾಯಕ ಅರುಣ್ ಜೇಟ್ಲಿಯವರ ಆರೋಗ್ಯ ಸ್ಥಿತಿಯು ಗಂಭೀರಾವಸ್ಥೆಯಲ್ಲಿದೆ ಎಂದು ತಿಳಿದು ಬಂದಿದೆ. ಸದ್ಯ ದೆಹಲಿಯ ಆಸ್ಪತ್ರೆಯಲ್ಲಿ ಅರುಣ್ ಜೇಟ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹಲವಾರು ನಾಯಕರು ಆಗಮಿಸಿ ಯೋಗಕ್ಷೇಮ ವಿಚಾರಿಸಿದ್ದಾರೆ. ನಿನ್ನೆ ರಾಮನಾಥ ಕೋವಿಂದ್, ನರೇಂದ್ರ ಮೋದಿ ಹಾಗೂ ಅಮಿತ ಶಾ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

ನರೇಂದ್ರ ಮೋದಿ ಅರುಣ್ ಜೇಟ್ಲಿಯವರ ಆರೋಗ್ಯದ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ. ಇಂದು ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ಭೇಟಿ ಕೊಡಲಿದ್ದಾರೆ. ಆಸ್ಪತ್ರೆಯ ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ ಅರುಣ್ ಜೇಟ್ಲಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ವಿಶೇಷ ವೈದ್ಯರ ತಂಡ ಅವರ ಆರೋಗ್ಯದ ಬಗ್ಗೆ ಕ್ಷಣ ಕ್ಷಣದ ತಪಾಸಣೆ ಮತ್ತು ಜಾಗ್ರತೆ ವಹಿಸುತ್ತಿದ್ದಾರೆ.ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿದ್ದಾರೆ.

LEAVE A REPLY

Please enter your comment!
Please enter your name here