ರಾಜೀನಾಮೆ ನೀಡಿದ ಕೇಂದ್ರ ಸರ್ಕಾರದ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್!

0
2955

ನ್ಯೂಸ್ ಕನ್ನಡ ವರದಿ-(21.06.18): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅರವಿಂದ ಸುಬ್ರಮಣಿಯನ್ ತಮ್ಮ ಕೆಲವು ವೈಯಕ್ತಿಕ ಕಾರಣಗಳಿಂದಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆಂದು ತಿಳಿದು ಬಂದಿದೆ. 2014ರ ಅಕ್ಟೋಬರ್‌ನಲ್ಲಿ ಹಣಕಾಸು ಸಚಿವಾಲಯಕ್ಕೆ ಮೂರು ವರ್ಷಗಳ ಅವಧಿಗೆ ಅವರು ನೇಮಕವಾಗಿದ್ದರು.

ನಂತರ ಒಂದು ವರ್ಷಗಳವರೆಗೆ ಅವರ ಅವಧಿಯನ್ನು ವಿಸ್ತರಿಸಲಾಗಿತ್ತು. ಅರವಿಂದ್‌ ನಿರ್ಗಮನದ ನಿರ್ಧಾರವನ್ನು ವಿತ್ತ ಸಚಿವ ಅರುಣ್‌ ಜೇಟ್ಲಿ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ಅಕ್ಟೋಬರ್‌ನಲ್ಲಿ ಅವಧಿ ಮುಗಿಯಲಿದ್ದರೂ, ಸೆಪ್ಟೆಂಬರ್‌ನಲ್ಲೇ ಅಮೆರಿಕಕ್ಕೆ ತೆರಳಲು ನಿರ್ಧರಿಸಿ ರುವುದಾಗಿ ಅರವಿಂದ್‌ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here