ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯಿಸಿ ಜನವರಿ 8 ರಂದು ಕರ್ನಾಟಕ ಬಂದ್‌ಗೆ ಕರೆ

0
2362

ನ್ಯೂಸ್ ಕನ್ನಡ ವರದಿ: ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯಿಸಿ ಜನವರಿ 8 ರಂದು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮತಿ ವತಿಯಿಂದ ಗ್ರಾಮೀಣ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.

ಎಲ್ಲಾ ರೈತರನ್ನು ಸಾಲದಿಂದ ಮುಕ್ತಿಗೊಳಿಸಬೇಕು. ಋಣಮುಕ್ತ ಕಾಯ್ದೆ ಜಾರಿ ಮತ್ತು ಸ್ವಾಮಿನಾಥನ್ ವರದಿ ಜಾರಿ, ಪ್ರವಾಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಗ್ರಾಮೀಣ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.

ರಾಜ್ಯ ರೈತ ಸಂಘದ ಸಂಘಟನೆಗಳು, ಅಖಿಲ ಭಾರತ ಕಿಸಾನ್ ಸಭಾ, ಕೃಷಿ ಕೂಲಿಕಾರರ ಸಂಘಗಳು ಸೇರಿದಂತೆ ಹಲವು ಸಂಘಟನೆಗಳು ಬಂದ್ ನಲ್ಲಿ ಭಾಗವಹಿಸಲಿವೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here