ಆರ್ಥಿಕ ಹಿಂಜರಿತ; ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಮಾರಾಟ: ನಿರ್ಮಲಾ ಸೀತಾರಾಮನ್

0
487

ನ್ಯೂಸ್ ಕನ್ನಡ ವರದಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ಕ್ರೋಡೀಕರಿಸುವ ನಿಟ್ಟಿನಲ್ಲಿ ಸರ್ಕಾರಿ ಸ್ವಾಮ್ಯದ ವಿಮಾನಯಾನ ಕಂಪೆನಿ ಏರ್ ಇಂಡಿಯಾ ಹಾಗೂ ತೈಲ ಶುದ್ಧೀಕರಣ ಮತ್ತು ಮಾರುಕಟ್ಟೆ ಕಂಪೆನಿ ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಸಂಸ್ಥೆಯನ್ನು ಮಾರ್ಚ್ ತಿಂಗಳಿನೊಳಗೆ ಮಾರಾಟ ಮಾಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಒಂದು ಲಕ್ಷ ಕೋಟಿ ರುಪಾಯಿಗಳನ್ನು ಕ್ರೋಢಿಕರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಎರಡು ಸಂಸ್ಥೆಗಳನ್ನು ಮಾರಾಟ ಮಾಡಲಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಮುಂದುವರೆದಿದ್ದು ಇದೇ ವರ್ಷ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ನಿರ್ಮಲಾ ಹೇಳಿದ್ದಾರೆ.

ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ಮಾರಾಟದ ಸಂಬಂಧ ಅಂತಾರಾಷ್ಟ್ರೀಯ ರೋಡ್ ಶೋಗಳಲ್ಲಿ ಹೂಡಿಕೆದಾರರಿಂದ ವ್ಯಾಪಕ ಆಸಕ್ತಿ ವ್ಯಕ್ತವಾಗಿದೆ. ಒಂದು ವರ್ಷದ ಹಿಂದೆಯೇ ಮಾರಾಟ ಮಾಡುವ ಪ್ರಕ್ರಿಯೆ ನಡೆದಿತ್ತು. ಆದರೆ, ಅಂದು ಹೂಡಿಕೆದಾರರಿಂದ ಸೂಕ್ತ ಸ್ಪಂದನೆ ದೊರಕದ ಕಾರಣ ಪ್ರಕ್ರಿಯೆ ಸ್ಥಗಿತಗೊಂಡಿತ್ತು ಎಂದು ವಿತ್ತ ಸಚಿವರು ತಿಳಿಸಿದ್ದಾರೆ.

ತೆರಿಗೆ ಸಂಗ್ರಹ ಒತ್ತಡದ ಸ್ಥಿತಿಯಲ್ಲಿ ಈ ಬಂಡವಾಳ ಹಿಂದೆಗೆತ ಕ್ರಮದಿಂದ ಸರ್ಕಾರದ ಆದಾಯ ಹೆಚ್ಚುವ ನಿರೀಕ್ಷೆ ಇದೆ. ಆರ್ಥಿಕ ಹಿಂಜರಿತವನ್ನು ತಡೆಯಲು ಸರ್ಕಾರ ಸಕಾಲದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು, ಹಲವು ವಲಯಗಳು ಒತ್ತಡದಿಂದ ಹೊರಬರುತ್ತಿವೆ ಎಂದರು.

LEAVE A REPLY

Please enter your comment!
Please enter your name here