ಬೆಂಗಳೂರು ಲಾಕ್‌ಡೌನ್!?: ಸಿಎಂ. ಯಡಿಯೂರಪ್ಪ ಹೇಳಿದ್ದೇನು ಗೊತ್ತೆ?

0
95

ನ್ಯೂಸ್ ಕನ್ನಡ ವರದಿ: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ನಿನ್ನೆ ಒಂದೇ ದಿನ 300ಕ್ಕೂ ಹೆಚ್ಚು ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೆಲವೊಂದು ಬಿಗಿಯಾದ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದ್ದು, ಇಂದು ಹಾಗೂ ನಾಳೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬೆಂಗಳೂರಿನಲ್ಲಿ ಲಾಕ್ ಡೌನ್ ಕುರಿತಂತೆ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸದ್ಯಕ್ಕೆ ಬೆಂಗಳೂರಿನಲ್ಲಿ ಪೂರ್ಣ ಲಾಕ್ ಡೌನ್ ಇಲ್ಲ. ಕೆಲವು ಏರಿಯಾಗಳಷ್ಟೇ ಲಾಕ್ ಡೌನ್ ಮಾಡಲಾಗಿದ್ದು, ಅದು ಮುಂದುವರೆಯಲಿದೆ ಎಂದರು. ಅಲ್ಲದೇ, ದಿನೇ ದಿನೇ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ.

ಹೀಗಾಗಿ ಕೆಲವು ಏರಿಯಾಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಇಂದು ಮಧ್ಯಾಹ್ನ ಕೃಷ್ಣಾದಲ್ಲಿ ಅಶೋಕ್ ಹಾಗೂ ಸಚಿವರು ಅಧಿಕಾರಿಗಳ ಸಭೆ ಕರೆದು ಕೋವಿಡ್ ತಡೆಗೆ ಕೈಗೊಳ್ಳಬೇಕಾದ ಕ್ರಮದ ಕುರಿತು ತೀರ್ಮಾನ ಮಾಡಲಾಗಿದೆ. ಇನ್ನು ನಾಳೆ ಬೆಂಗಳೂರಿನ ಎಲ್ಲ ಶಾಸಕರು, ಸಚಿವರು, ಸಭೆ ಸೇರಿ ಅವರೊಂದಿಗೂ ಸಭೆ ನಡೆಸಿ ಬಿಗಿ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದರು. ಇನ್ನು ಮಾರಕ ಸೋಂಕು ನಿಯಂತ್ರಣ ವಿಚಾರದಲ್ಲಿ ಬೆಂಗಳೂರು ದೇಶದಲ್ಲೇ ಇತರೇ ಮಹಾನಗರಗಳಿಗೆ ಮಾದರಿಯಾಗಿದೆ. ಬೇರೆ ರಾಜ್ಯದ ಪ್ರಮುಖ ನಗರಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೋವಿಡ್ ಕಂಟ್ರೋಲ್ ತಪ್ಪಿಲ್ಲ. ಆದರೂ ಕೆಲ ದಿನಗಳಿಂದ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರ ತಡೆಗೆ ಇಂದು ಮತ್ತು ನಾಳೆ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

LEAVE A REPLY

Please enter your comment!
Please enter your name here