ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜನವರಿ 8 ಕ್ಕೆ ಭಾರತ್ ಬಂದ್‌ಗೆ ಸಿಪಿಐ ಕರೆ

0
303

ನ್ಯೂಸ್ ಕನ್ನಡ ವರದಿ: ಪೌರತ್ವ ತಿದ್ದುಪಡಿ ಕಾಯ್ದೆ, ಎನ್ ಆರ್ ಸಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಜನವರಿ 8 ಕ್ಕೆ ಭಾರತ್ ಬಂದ್ ಗೆ ಸಿಪಿಐ ಕರೆ ನೀಡಿದೆ ಎಂದು ಸಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಡಿ. ರಾಜಾ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ದೇಶದಲ್ಲಿ ಆರ್ಥಿಕ ಹಿಂಜರಿತ, ರೂಪಾಯಿ ಮೌಲ್ಯ ಕುಸಿತ, ಸಾರ್ವಜನಿಕ ಉದ್ಯಮಗಳ ಮಾರಾಟ, ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳನ್ನು ಮರೆಮಾಚಲು ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪೌರತ್ವ ತಿದ್ದುಪಡಿ ಹಾಗೂ ಎನ್ ಆರ್ ಸಿ ವಿರುದ್ಧ ಜನವರಿ 1 ರಿಂದ 7 ರ ವರೆಗೆ ಎಡಪಂಥೀಯ ಪಕ್ಷಗಳು, ಸಂಘಟನೆಗಳ ನೇತೃತ್ವದಲ್ಲಿ ಜನ ಜಾಗೃತಿ ಆಂದೋಲನ ನಡೆಯಲಿದ್ದು, ಜನವರಿ 8 ಕ್ಕೆ ಭಾರತ್ ಬಂದ್ ಗೆ ಕರೆ ನೀಡಲಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here