ನನ್ಮ ಕೂಟಾಯಿಮ ಮತ್ತು ಜನರಕ್ಷಾ ಬ್ಲಡ್ ಡೋನರ್ಸ್ ಕಾಸರಗೋಡು ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಜಂಟಿ ಆಶ್ರಯದಲ್ಲಿ ಕುಂಬ್ಳೆಯಲ್ಲಿ ಯಶಸ್ವೀ ರಕ್ತದಾನ ಶಿಬಿರ

0
248

ಕುಂಬ್ಳೆ,ಕಾಸರಗೋಡು ನವೆಂಬರ್ 10 : ನನ್ಮ ಕೂಟಾಯಿಮ ಮುಳಿಯಡ್ಕಮ್,ಕುಂಬ್ಳೆ ಮತ್ತು ಜನರಕ್ಷಾ ಬ್ಲಡ್ ಡೋನರ್ಸ್ ಕಾಸರಗೋಡು ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) (ಎಚ್.ಡಿ.ಎಫ್.ಸಿ ಬ್ಯಾಂಕ್ ಮಂಗಳೂರು,ಅಧಿಕೃತ ಪ್ರಾಯೋಜಕರು) ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ 09 ನವೆಂಬರ್ 2019ನೇ ಶನಿವಾರದಂದು ಕಾಸರಗೋಡು ಕುಂಬ್ಳೆಯ ಮುಳಿಯಡ್ಕಮ್ ಅಂಗನವಾಡಿ ಶಾಲಾ ವಠಾರದಲ್ಲಿ ಯಶಸ್ವಿಯಾಗಿ ನಡೆಯಿತು.

ಜನರಕ್ಷಾ ಚಾರೀಟೇಬಲ್ ಟ್ರಸ್ಟ್ ಇದರ ಚೆಯರ್ ಮ್ಯಾನ್ ನಾಸರ್ ಬಾಯಾರ್ ರವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮವನ್ನು ಸಾಮಾಜಿಕ ಸೇವಾ ಕಾರ್ಯಕರ್ತ ಕಯ್ಯುಂ ಮಾನ್ಯರವರು ಉದ್ಘಾಟಿಸಿದರು.

ವೇದಿಕೆಯಲ್ಲಿ ರಿಯಾಝ್ ಕುನ್ನಿಲ್,ರಝಾಕ್ ಮಾಸ್ಟರ್,ನಾಸರ್ ಮಾನ್ಯ,ಇಮ್ರಾನ್ ಬೈತಾರ್ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಇದರ ನಿರ್ವಾಹಕರು ಉಪಸ್ಥಿತರಿದ್ದರು.

ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರದಲ್ಲಿ ಒಟ್ಟು 31 ಮಂದಿ ಪಾಲ್ಗೊಂಡು ರಕ್ತದಾನ ಮಾಡಿದರು.ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಇದರ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.

ನನ್ಮ ಕೂಟಾಯಿಮ ಇದರ ಅದ್ಯಕ್ಷರಾದ ರಜಾಕ್ ಮುಳಿಯಡ್ಕ ಸ್ವಾಗತಿಸಿ,ಕಾರ್ಯಕ್ರಮ ನಿರೂಪಣೆಗೈದರು.

ರಕ್ತದಾನ ಮಾಡಿದ ಸರ್ವ ಸಹೃದಯೀ ದಾನಿಗಳಿಗೂ, ಆಸ್ಪತ್ರೆ ಸಿಬ್ಬಂದಿ ವರ್ಗಕ್ಕೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಹಾಗೂ ಕಾರ್ಯಕ್ರಮದ ಯಶಸ್ವಿಯಾಗಿ ಹಗಳಿರುಲು ದುಡಿದ ಎಲ್ಲಾ ಕಾರ್ಯಕರ್ತರಿಗೂ,ಮಾಧ್ಯಮ ಪ್ರತಿನಿಧಿಗಳಿಗೂ ಸಂಘಟಕರು ಕೃತಜ್ಞತೆಯನ್ನು ತಿಳಿಸಿದ್ದಾರೆ.

ಪ್ರಕಟಣೆ:
ಮಾಧ್ಯಮ ವಿಭಾಗ:
ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ)

LEAVE A REPLY

Please enter your comment!
Please enter your name here