73 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಣಿಪಾಲದಲ್ಲಿ ಯಶಸ್ವೀ ರಕ್ತದಾನ ಶಿಬಿರ

0
291

73 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಣಿಪಾಲದಲ್ಲಿ ಯಶಸ್ವೀ ರಕ್ತದಾನ ಶಿಬಿರ

ಮಣಿಪಾಲ,ಆಗಸ್ಟ್ 15: ಮೊಗವೀರ ಯುವ ಸಂಘಟನೆ (ರಿ) ಉಡುಪಿ, ಬೆಳ್ಳಂಪಳ್ಳಿ ಘಟಕ ಮತ್ತು ಡಾ.ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಉಡುಪಿ ಮತ್ತು MIT ಸ್ಟೂಡೆಂಟ್ಸ್ ಕೌನ್ಸಿಲ್ MIT ಮಣಿಪಾಲ ಮತ್ತು ರೋಟರಿ ಕ್ಲಬ್ MIT ಮಣಿಪಾಲ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಸಂಸ್ಥೆಯ ಜಂಟಿ ಆಶ್ರಯದಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆ ರಕ್ತನಿಧಿ ಸಹಭಾಗಿತ್ವದಲ್ಲಿ 73 ನೇ ಸ್ವಾತಂತ್ರ್ಯೋ ತ್ಸವದ ಪ್ರಯುಕ್ತ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರವು ದಿನಾಂಕ 15/08/2019 ನೇ ಗುರುವಾರದಂದು ಮಣಿಪಾಲದ MIT ಇದರ ಫುಡ್ ಕೋರ್ಟ್ 1 ರಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ಬೆಳ್ತಂಗಡಿ ವಲಯ ನಿರ್ವಾಹಕರಾದ ಲಾರೆನ್ಸ್ ರವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಯಶಸ್ವಿಯಾಗಿ ನಡೆದ ರಕ್ತ ದಾನ ಶಿಬಿರದಲ್ಲಿ ಒಟ್ಟು 153 ಮಂದಿ ಪಾಲ್ಗೊಂಡು ರಕ್ತದಾನ ಮಾಡಿದರು.ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆ ರಕ್ತನಿಧಿ ಇದರ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.

ಇದೇ ಸಂದರ್ಭದಲ್ಲಿ ರಕ್ತ ಪೊರೈಕೆಯಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ತಂಡವನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಎಂ.ಐ.ಟಿ ಮಣಿಪಾಲ ಇದರ ಪ್ರಾಧ್ಯಾಪಕರಾದ ಪ್ರೊ.ಬಾಲಕೃಷ್ಣ ಮದ್ದೋಡಿ,ರಕ್ತದ ಆಪತ್ಭಾಂದವ ಸತೀಶ್ ಸಾಲ್ಯಾನ್,ಮಾತೃಶ್ರೀ ಸೇವಾ ಸಂಘ ‌ಮಣಿಪಾಲ ಇದರ ಅಧ್ಯಕ್ಷರಾದ ಅರವಿಂದ್ ‌ಮಣಿಪಾಲ,ರೋಟರೆಕ್ಟ್ ಕ್ಲಬ್ ಎಂ.ಐ.ಟಿ ಮಣಿಪಾಲ ಇದರ ಆಶೀಶ್ ಅರವಿಂದ್,ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ನಿರ್ವಾಹಕರಾದ ಸಮೀರ್ ಸೀಕೋ ಮತ್ತು ಫೈರೋಝ್ ವಳಚ್ಚಿಲ್, ಮಣಿಪಾಲ ಕೆಎಂಸಿ ರಕ್ತನಿಧಿ ವಿಭಾಗದ ವೈದ್ಯಾಧಿಕಾರಿ ಡಾ.ಗಣೇಶ್ ಮೋಹನ್ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕುಮಾರಿ ದಿವ್ಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ರೋಟರೆಕ್ಟ್ ಕ್ಲಬ್ ಅಧ್ಯಕ್ಷ ಆಶೀಶ್ ಅರವಿಂದ್ ದನ್ಯವಾದ ಅರ್ಪಿಸಿದರು.

ರಕ್ತ ದಾನ ಮಾಡಿದ ಸರ್ವ ಸಹೃದಯೀ ದಾನಿಗಳಿಗೂ,ಆಸ್ಪತ್ರೆಯ ಸಿಬ್ಬಂದಿ ವರ್ಗಕ್ಕೂ,ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದವರಿಗೆ ಹಾಗೂ ಕಾರ್ಯಕ್ರಮದ ಯಶಸ್ಸಿಗಾಗಿ ಹಗಲಿರುಳು ದುಡಿದ ಎಲ್ಲಾ ಕಾರ್ಯಕರ್ತರಿಗೂ,ಮಾಧ್ಯಮ ಪ್ರತಿನಿಧಿಗಳಿಗೂ ಸಂಘಟಕರು ಕೃತಜ್ಞತೆಗಳನ್ನು ತಿಳಿಸಿದ್ದಾರೆ.

ಪ್ರಕಟಣೆ:
ಮಾಧ್ಯಮ ವಿಭಾಗ
ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ).

LEAVE A REPLY

Please enter your comment!
Please enter your name here