ಅನರ್ಹ ಶಾಸಕ ರೋಶನ್ ಬೇಗ್‌ಗೆ ಟಿಕೇಟ್ ಕೈ ತಪ್ಪಲು ಬಿಜೆಪಿ ಹೈಕಮಾಂಡ್ ಕಾರಣನ? ಸುದ್ದಿ ಓದಿ

0
224

ನ್ಯೂಸ್ ಕನ್ನಡ ವರದಿ: ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಫೈನಲ್ ಆಗಿದೆ. ಎಂ.ಶರವಣ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ. ಶಿವಾಜಿನಗರ ಕ್ಷೇತ್ರದಿಂದ ಸ್ಪರ್ಧಿಸಲು ಉತ್ಸುಕರಾಗಿದ್ದ ರೋಶನ್ ಬೇಗ್ ಅವರ ಆಸೆಗೆ ಬಿಜೆಪಿ ಹೈಕಮಾಂಡ್ ತಣ್ಣೀರೆರಚಿದೆ.

ರೋಶನ್ ಬೇಗ್ ಶಿವಾಜಿನಗರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಐಎಂಎ ಸೇರಿದಂತೆ ಕೆಲ ಪ್ರಕರಣಗಳಲ್ಲಿ ರೋಶನ್ ಬೇಗ್ ಅವರ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರೋಶನ್ ಬೇಗ್ ಅವರಿಗೆ ಟಿಕೆಟ್ ನೀಡಿಲ್ಲ. ಎಂ.ಶರವಣ ಅವರು ಬಿಬಿಎಂಪಿಯ ಮಾಜಿ ಕಾರ್ಪೋರೇಟರ್ ಆಗಿದ್ದು, ಅವರನ್ನು ಇಂದು ಮತ್ತೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ತಮಿಳು ಮತಗಳನ್ನು ಗುರಿಯಾಗಿಸಿ ಬಿಜೆಪಿ ಎಂ.ಶರವಣ ಅವರಿಗೆ ಟಿಕೆಟ್ ನೀಡಿದೆ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here