ಸದ್ಯಕ್ಕೆ ಬಿಜೆಪಿ ಅಧ್ಯಕ್ಷ ಬದಲಾವಣೆ ಇಲ್ಲ? ಊಹಾಪೋಹಗಳಿಗೆ ತೆರೆ ಎಳೆದ ಬಿಜೆಪಿ!

0
303

ನ್ಯೂಸ್ ಕನ್ನಡ ವರದಿ (13-6-2019): ಜೂನ್ 13 ರಂದು ಬಿಜೆಪಿ ಉನ್ನತ ಸಮಿತಿ ಸಭೆ ನಡೆಯಲಿದ್ದು, ಅಂದು ಬಿಜೆಪಿಯ ನೂತನ ರಾಷ್ಟ್ರಾಧ್ಯಕ್ಷರನ್ನೂ ಆರಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು. ಸದ್ಯಕ್ಕೆ ಅಮಿತ್ ಶಾ ಅವರನ್ನು ಅಧ್ಯಕ್ಷ ಸ್ಥಾನದಿಂದ ಬದಲಿಸುವ ಯೋಚನೆ ಇಲ್ಲ ಎಂದು ಬಿಜೆಪಿ ಹೇಳಿದೆ. ಉನ್ನತ ಮೂಲಗಳ ಮಾಹಿತಿ ಪ್ರಕಾರ ಅಮಿತ್ ಶಾ ಅವರನ್ನು ಸದ್ಯಕ್ಕೆ ಬದಲಿಸುವುದಕ್ಕೆ ಬಿಜೆಪಿ ತಯಾರಿಲ್ಲ ಎಂದು ತಿಳಿದುಬಂದಿದೆ.

ಇದೇ ವರ್ಷ ನಡೆಯಲಿರುವ ಮಹಾರಾಷ್ಟ್ರ. ಹರ್ಯಾಣ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಯ ನಂತರ ಅಧ್ಯಕ್ಷ ಸ್ಥಾನದ ಬದಲಾವಣೆಯ ಬಗ್ಗೆ ಯೋಚಿಸಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಗೃಹಸಚಿವರೂ ಆಗಿರುವ ಅಮಿತ್ ಶಾ ಅವರಿಗೆ ಒತ್ತಡವಾಗಬಾರದೆಂಬ ಕಾರಣಕ್ಕೆ ಕಾರ್ಯಾಧ್ಯಕ್ಷ ಹುದ್ದೆಯನ್ನು ಸೃಷ್ಟಿಸಲಾಗುತ್ತಿದ್ದು, ಅಮಿತ್ ಶಾ ಪಕ್ಷದ ಜವಾಬ್ದಾರಿಗಳನ್ನು ಕಾರ್ಯಾಧ್ಯಕ್ಷರು ವಹಿಸಲಿದ್ದಾರೆ. ಈ ಹಿಂದೆ 2014ರಲ್ಲಿ ಅಭೂತಪೂರ್ವ ಜಯದ ಬಳಿಕ ರಾಜ್’ನಾಥ್ ಸಿಂಗ್ ಗೃಹಸಚಿವರಾದಾಗ ಅವರ ಪಕ್ಷಾಧ್ಯಕ್ಷ ಸ್ಥಾನವನ್ನು ಅಮಿತ್ ಶಾ ಏರಿದ್ದರು.

LEAVE A REPLY

Please enter your comment!
Please enter your name here