ಬಿಜೆಪಿಯಿಂದ ಸಿಎಂ ಕಚೇರಿಗೆ ಮುತ್ತಿಗೆ, ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ಏನು ಗೊತ್ತೇ?

0
162

ನ್ಯೂಸ್ ಕನ್ನಡ ವರದಿ (16-6-2019): ಜಿಂದಾಲ್ ಕಂಪನಿಗೆ ಭೂ ಪರಭಾರೆ ವಿರೋಧಿಸಿ ಮೌರ್ಯ ಸರ್ಕಲ್‌ನಲ್ಲಿ ಮೈತ್ರಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು ಇಂದು ಮಧ್ಯಾಹ್ನ 12 ಗಂಟೆಗೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಈ ತೀರ್ಮಾನದ ಬೆನ್ನಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಬಿಜೆಪಿ ನಾಯಕರ ಅಹೋರಾತ್ರಿ ಪ್ರತಿಭಟನೆಯನ್ನು ಗಮನಿಸಿದ್ದೇನೆ. ಸಿಎಂ ಕಚೇರಿಗೆ ಮುತ್ತಿಗೆಯ ಅವಶ್ಯಕತೆಯಿಲ್ಲ. ಜಿಂದಾಲ್, ಬರ, ರೈತರ ಸಾಲಮನ್ನಾ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ಧನಿದ್ದೇನೆ. ಪ್ರಧಾನಿ ಸೇರಿದಂತೆ ಕೇಂದ್ರದ ಸಚಿವರೊಂದಿಗೆ ಹಲವು ಸಮಸ್ಯೆ ಕುರಿತು ಚರ್ಚಿಸಿದ್ದೇನೆ. ನಿಮ್ಮ ಸಮಯ ತಿಳಿಸಿ ಚರ್ಚೆಗೆ ನಾನು ಸಿದ್ಧ ಎಂದು ಟಾಂಗ್‌ ನೀಡಿದ್ದಾರೆ. ಮುತ್ತಿಗೆ ಹಿನ್ನೆಲೆಯಲ್ಲಿ ಪೊಲೀಸರಿಂದ ಬಿಗಿ ಭದ್ರತೆ ಒದಗಿಸಲಾಗಿದೆ.

LEAVE A REPLY

Please enter your comment!
Please enter your name here