Thursday August 10 2017

Follow on us:

Contact Us

ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಈವರೆಗೆ ಮೃತಪಟ್ಟ ವಿದ್ಯಾರ್ಥಿಗಳೆಷ್ಟು ಗೊತ್ತೇ?

ನ್ಯೂಸ್ ಕನ್ನಡ ವರದಿ-(10.08.17): ದಕ್ಷಿಣಕನ್ನಡದ ಪ್ರತಿಷ್ಟಿತ ಆಳ್ವಾಸ್ ವಿದ್ಯಾಸಂಸ್ಥೆ ಮುಡಬಿದಿರೆಯಲ್ಲಿ ಇತ್ತೀಚೆಗೆ ಕಟೀಲು ನಿವಾಸಿ ಕಾವ್ಯಶ್ರೀ ಪೂಜಾರಿ ಎಂಬ ವಿದ್ಯಾರ್ಥಿನಿಯು ನಿಗೂಢವಾಗಿ ಸಾವಿಗೀಡಾಗಿದ್ದು, ಈ ಪ್ರಕರಣವು ಇದೀಗ ವಿವಿಧ ಸ್ವರೂಪ ಪಡೆದುಕೊಳ್ಳುತ್ತಿದೆ. ಇದರ ಮಧ್ಯದಲ್ಲೇ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಈ ಮೊದಲು ಎಷ್ಟು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಾವಿಗೀಡಾಗಿದ್ದರು ಎನ್ನುವ ಕುರಿತಾದಂತೆ ಇದೀಗ ಮಾಹಿತಿ ಹಕ್ಕು ಕಾಯ್ದೆಯ ಮೂಲಕ ಸ್ಫೋಟಕ ಮಾಹಿತಿ ದೊರಕಿದೆ.

ಸ್ಟೂಡೆಂಟ್ ಫೆಡೆರೇಶನ್ ಆಫ್ ಇಂಡಿಯಾದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ನಿತಿನ್ ಕುತ್ತಾರ್ ರವರು ಆಳ್ವಾಸ್ ನಲ್ಲಿ ಸಾವಿಗೀಡಾದ ಒಟ್ಟು ವಿದ್ಯಾರ್ಥಿಗಳ ಕುರಿತಾದಂತೆ ಸಮಗ್ರ ಮಾಹಿತಿ ನೀಡಬೇಕೆಂದು ಮಾಹಿತಿ ಹಕ್ಕು ಕಾಯ್ದೆಯ ಮುಖಾಂತರ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಮೊದಲು ಸರಿಯಾಗಿ ಪ್ರತಿಕ್ರಿಯೆ ಬಂದಿರಲಿಲ್ಲ. ಕಾವ್ಯಾ ಸಾವಿನ ಬಳಿಕ ಈ ಕುರಿತು ಮತ್ತೆ ಅರ್ಜಿ ಸಲ್ಲಿಸಿದಾಗ ಹೊರಬಂದಿದ್ದು ಸ್ಫೋಟಕ ಮಾಹಿತಿಯಾಗಿತ್ತು. ಆಳ್ವಾಸ್ ನಲ್ಲಿ 2008ರಿಂದ 2016ರ ಎಡೆಯಲ್ಲಿ  ಒಟ್ಟು 10 ವಿದ್ಯಾರ್ಥಿಗಳು ಸಾವಿಗೀಡಾದ ಕುರಿತು ಈ ಮಾಹಿತಿಯಲ್ಲಿ ಉಲ್ಲೇಖಿಸಲಾಗಿದೆ.

ಮೃತಪಟ್ಟ ವಿದ್ಯಾರ್ಥಿಗಳಲ್ಲಿ 8 ವಿದ್ಯಾರ್ಥಿಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಇನ್ನುಳಿದ ಇಬ್ಬರು ವಿದ್ಯಾರ್ಥಿಗಳು ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ ಎಂದು ಇದರಲ್ಲಿ ಉಲ್ಲೇಖಿಸಲಾಗಿದೆ. ಇವರೆಲ್ಲರೂ ದಕ್ಷಿಣ ಕನ್ನಡ ಜಿಲ್ಲೆಗೆ ಒಳಪಟ್ಟವರಾಗಿರದೆ, ಹೊರಜಿಲ್ಲೆಯಿಂದ ವ್ಯಾಸಂಗಕ್ಕೆ ಬಂದ ವಿದ್ಯಾರ್ಥಿಗಳಾಗಿದ್ದಾರೆ. ಆದ್ದರಿಂದ ಈ ಕೊಲೆಗಳು ಹೆಚ್ಚಾಗಿ ಎಲ್ಲೂ ಸದ್ದು ಮಾಡಲಿಲ್ಲ ಎನ್ನುತ್ತಾರೆ ನಾಗರಿಕರು. ಇದೀಗ ಕಾವ್ಯಾ ಪೂಜಾರಿಯ ಸಆವಿನ ಬಳಿಕ ಆಳ್ವಾಸ್ ವಿದ್ಯಾಸಂಸ್ಥೆಗೆ ನಿಜಕ್ಕೂ ಕಂಟಕ ಬಂದೊದಗಿದೆ.

photo cst: public tv

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕಲ್ಲಡ್ಕ ಪ್ರಭಾಕರ ಭಟ್ ರ ಹಿಂದೂ ಧರ್ಮವನ್ನು ನಾನು ಒಪ್ಪುವುದಿಲ್ಲ: ದಿನೇಶ್ ಅಮಿನ್ ಮಟ್ಟು

ಮುಂದಿನ ಸುದ್ದಿ »

ಕುಂಬ್ಳೆ: ಬ್ಲಡ್ ಡೋನರ್ಸ್ ಮಂಗಳೂರು ವತಿಯಿಂದ ಯಶಸ್ವಿಯಾಗಿ ನಡೆದ ಬೃಹತ್  ರಕ್ತದಾನ ಶಿಬಿರ

ಸಿನೆಮಾ

 • ಸರಳವಾಗಿ ರಿಜಿಸ್ಟರ್ ಮದುವೆಯಾದ ಮುಸ್ತಫಾ-ಪ್ರಿಯಾಮಣಿ

  August 23, 2017

  ಬೆಂಗಳೂರು: ತಮಿಳು, ತೆಲುಗು, ಕನ್ನಡ, ಹಿಂದಿ ಸೇರಿದಂತೆ ಹಲವು ಭಾಷೆಗಳ ಸಿನಿಮಾದಲ್ಲಿ ನಟಿಸಿದ್ದ ಬಹುಭಾಷಾ ತಾರೆ ಪ್ರಿಯಾಮಣಿ ಇಂದು ತಮ್ಮ ಹಲವು ಕಾಲದ ಗೆಳೆಯ ಮುಸ್ತಫಾರಾಜಾರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಜಯನಗರ ರಿಜಿಸ್ಟರ್ ಆಫೀಸಿಗೆ ನಟಿ ...

  Read More
 • ಈ ಬಾರಿ ಗಣೇಶೋತ್ಸವ ಆಚರಿಸದ ಸಲ್ಮಾನ್ ಖಾನ್: ಕಾರಣವೇನು ಗೊತ್ತೇ?

  August 22, 2017

  ನ್ಯೂಸ್ ಕನ್ನಡ-(22.08.17): ಬಾಲಿವುಡ್ ನಟ ಸಲ್ಮಾನ್ ಖಾನ್ ಗಣಪತಿ ಭಕ್ತನಾಗಿದ್ದು, ಪ್ರತೀವರ್ಷವೂ ತಮ್ಮ ಮನೆಯಲ್ಲಿ ಗಣೇಶೋತ್ಸವವನ್ನು ಆಚರಿಸುತ್ತಾರೆ. ಆದರೆ ಈ ಬಾರಿ ಸತತ 15ವರ್ಷಗಳಿಂದ ತಮ್ಮ ಮನೆಯಲ್ಲಿ ನಡೆಸುತ್ತಾ ಬಂದಿದ್ದ ವೈಭವದ ಗಣೇಶೋತ್ಸವವನ್ನು ಕೈಬಿಟ್ಟು ಸಲ್ಮಾನ್ ಖಾನ್ ...

  Read More
 • ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆಗೈದ ತಮಿಳು ನಟ ಆರ್ಯ

  August 21, 2017

  ನ್ಯೂಸ್ ಕನ್ನಡ ವರದಿ-(21.08.17): ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿರುವ ಖ್ಯಾತ ಯುವನಟ ಆರ್ಯ ಮಮ್ಮೂಟಿ ಅಭಿನಯದ ಗಾಡ್ ಫಾದರ್ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ, ಕೇರಳದಾದ್ಯಂತ ಅಸಂಖ್ಯಾತ ಅಭಿಮಾನಿಗಳನ್ನು ಸೃಷ್ಟಿಸಿಕೊಂಡಿದ್ದರು. ಇದೀಗ ಸೂಪರ್ ಹಿಟ್ ಚಿತ್ರವಾದ ...

  Read More
 • ಕನ್ನಡ ಸಿನಿಮಾದಲ್ಲಿ ಬಣ್ಣ ಹಚ್ಚಲಿರುವ ಕ್ರಿಕೆಟಿಗ ಶ್ರೀಶಾಂತ್!

  August 16, 2017

  ಸ್ಪಾಟ್ ಫಿಕ್ಸಿಂಗ್, ಮ್ಯಾಚ್ ಫಿಕ್ಸಿಂಗ್‌ ಆರೋಪಗಳಿಂದ ಕಂಗಾಲಾಗಿದ್ದ ಕೇರಳ ಮೂಲದ ವೇಗಿ, ರಾಜಸ್ಥಾನ್ ರಾಯಲ್ಸ್‌ನ ಮಾಜಿ ಆಟಗಾರ ಶ್ರೀಶಾಂತ್ ಇತ್ತೀಚೆಗಷ್ಟೆ ನಿರಾಳರಾಗಿದ್ದಾರೆ. ಅವರ ಮೇಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಜೀವ ನಿಷೇಧ ಹೇರಿತ್ತು. ಇತ್ತೀಚೆಗಷ್ಟೇ ...

  Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×