Tuesday January 9 2018

Follow on us:

Contact Us

ಮೂಡಬಿದಿರೆ: ಹುಟ್ಟುಹಬ್ಬದಂದೇ ಆತ್ಮಹತ್ಯೆಗೆ ಶರಣಾದ ಆಳ್ವಾಸ್ ವಿದ್ಯಾರ್ಥಿ!

ನ್ಯೂಸ್ ಕನ್ನಡ ವರದಿ-(9.01.18): ಮಂಗಳೂರು: ಮೂಡಬಿದಿರೆಯಲ್ಲಿರುವ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿರುವ ಆಳ್ವಾಸ್ ಕಾಲೇಜಿನ ಪಿಯುಸಿ ವಿದ್ಯಾರ್ಥಿಯೊಬ್ಬ ತನ್ನ ಹುಟ್ಟುಹಬ್ಬದ ದಿನದಂದೇ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ.

ಬೆಂಗಳೂರಿನ ಅಬ್ಬಿಗೆರೆ ಮೂಲದ ತೇಜಸ್ (16) ಎಂಬವನೇ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ತೇಜಸ್ ತಾಯಿ ಈ ಹಿಂದೆ ಮೃತಪಟ್ಟಿದ್ದರು ಮತ್ತು ತಂದೆ ಎರಡನೇ ಮದುವೆ ಮಾಡಿಕೊಂಡಿದ್ದರು. ಕಳೆದ ಸೋಮವಾರದಂದು ತೇಜಸ್ ನನ್ನು ಭೇಟಿ ಮಾಡಿದ್ದ ತಂದೆಯೊಂದಿಗೆ ತನ್ನ ಜನ್ಮ ದಿನ ಆಚರಿಸಿದ್ದ. ಈ ವೇಳೆ ತಂದೆ ಬೆನ್ನು ನೋವಿನ ಬಗ್ಗೆ ತೇಜಸ್ ಬಳಿ ಹೇಳಿದ್ದು, ಇದರಿಂದ ನೊಂದುಕೊಂಡಿದ್ದ.

ಇದನ್ನೇ ತನ್ನ ಡೆತ್ ನೋಟ್ ನಲ್ಲಿ ಬರೆದಿರುವ ತೇಜಸ್, ತಾಯಿ ಕಳೆದುಕೊಡಿದ್ದು ಹಾಗೂ ತಂದೆಯ ಬೆನ್ನು ನೋವಿನ ಬಗ್ಗೆ ನೋವು ವ್ಯಕ್ತಪಡಿಸಿದ್ದಾನೆ. ಇದೀಗ ಡೆತ್ ನೋಟ್ ವಶಪಡಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ದೀಪಕ್ ಹತ್ಯೆಯಲ್ಲಿ ಬಿಜೆಪಿ ಕಾರ್ಪೋರೇಟರ್ ಕೈವಾಡ: ದ.ಕ ಜಿಲ್ಲಾ ಕಾಂಗ್ರೆಸ್ ಆರೋಪ

ಮುಂದಿನ ಸುದ್ದಿ »

ಅಕ್ರಮ ಭೂ ಹಗರಣ: ಆರ್ ಅಶೋಕ್ ವಿರುದ್ಧ FIR ದಾಖಲಿಸಿದ ಭ್ರಷ್ಟಾಚಾರ ನಿಗ್ರಹ ದಳ!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×