Saturday August 12 2017

Follow on us:

Contact Us

ಈ ಬಾರಿ ಕರ್ನಾಟಕದಲ್ಲಿ ಬಿಜೆಪಿಯದ್ದೇ ಸರಕಾರ: ಅಮಿತ್ ಶಾ

ಬೆಂಗಳೂರು: ರಾಜ್ಯದಲ್ಲಿ ವಾಸ್ತವ ಪರಿಸ್ಥಿತಿ ಅರಿತು ಮುಂದಿನ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಸೂತ್ರ ರೂಪಿಸುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ಶನಿವಾರ ನಗರಕ್ಕೆ ಬಂದಿದ್ದಾರೆ.

ಪಕ್ಷದಲ್ಲಿ ಒಗ್ಗಟ್ಟಿದ್ದು, ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಚುನಾವಣಾ ಕಣಕ್ಕಿಳಿಯಲು ಸಮರ್ಥವಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದನ್ನು ಕಾಣಲಿದ್ದೇವೆ ಎಂದು ಅಮಿತ್‌ ಷಾ ಹೇಳಿದರು. ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಳೆದ ಐದು ವರ್ಷಗಳಿಂದ ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರದ ಭ್ರಷ್ಟ ಹಾಗೂ ದುರಾಡಳಿತದ ವಿರುದ್ಧ ಬಿಜೆಪಿ ಸಮರ್ಥ ಹೋರಾಟ ನಡೆಸಿದ್ದು, ಮುಂಬರುವ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ಮತ ನೀಡಿ ಅಧಿಕಾರಕ್ಕೆ ತರಲು ನಿರ್ಧಾರಿಸಿದ್ದಾರೆ ಎಂದರು. ‘ಅಬ್‌ ಕಿ ಬಾರ್‌ ಬಿಜೆಪಿ ಸರ್ಕಾರ್‌(ಈ ಬಾರಿ ಬಿಜೆಪಿಯದ್ದೇ ಸರ್ಕಾರ)’ ಎಂಬ ಅರಿವನ್ನು ಪಕ್ಷದ ಕಾರ್ಯಕರ್ತರಲ್ಲಿ ಮೂಡಿಸಲು ಬಂದಿದ್ದೇನೆ. ಮುಂದಿನ ಫೆಬ್ರುವರಿ–ಮಾರ್ಚ್‌ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ’ವಿಜಯರಥ’ ಕರ್ನಾಟಕ ತಲುಪಲಿದ್ದು, ಆ ಹೊತ್ತಿಗೆ ರಾಜ್ಯ ವಿಧಾನಸಭಾ ಕ್ಷೇತ್ರಗಳು ಬಿಜೆಪಿಯದ್ದಾಗಿರಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕಲ್ಲಡ್ಕ ಶಾಲೆಗೆ ಅನುದಾನ ರದ್ದುಪಡಿಸಿದ್ದು ರಾಕ್ಷಸೀಯ ಪ್ರವೃತ್ತಿ: ಜನಾರ್ದನ ಪೂಜಾರಿ

ಮುಂದಿನ ಸುದ್ದಿ »

ಉತ್ತರಪ್ರದೇಶ: ಆಕ್ಸಿಜನ್ ಇಲ್ಲದೇ ಪರದಾಡುತ್ತಿದ್ದ ಹಲವು ಮಕ್ಕಳನ್ನು ರಕ್ಷಿಸಿದ ಡಾ. ಕಫೀಲ್ ಅಹ್ಮದ್

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×