Tuesday March 13 2018

Follow on us:

Contact Us

ಸೋನಿಯಾ ಗಾಂಧಿ, ರಾಹುಲ್ ಗಾಂಧಿಯ ರಕ್ತದಲ್ಲೇ ಪ್ರಜಾಪ್ರಭುತ್ವವಿಲ್ಲ!: ಅನಂತ್ ಕುಮಾರ್

ನ್ಯೂಸ್ ಕನ್ನಡ ವರದಿ: ಸಂಸತ್ತಿನ ಕಲಾಪಕ್ಕೆ ನಿರಂತರ ಅಡ್ಡಿಮಾಡುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ, ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಕಿಡಿಕಾರಿದ್ದಾರೆ.

ಪಾರ್ಲಿಮೆಂಟ್ ಬೋರ್ಡ್ ಮೀಟಿಂಗ್ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಸಂಸತ್ತಿನಲ್ಲಿ ಚರ್ಚೆಗಳು ನಡೆಯಲು ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷಗಳೂ ಅವಕಾಶ ಮಾಡಿಕೊಡಬೇಕು. ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ ಅನ್ನಿಸುತ್ತೆ. ಪ್ರಜಾಪ್ರಭುತ್ವದ ಬಗ್ಗೆ ಅವರಿಬ್ಬರೂ ಭಾಷಣ ಮಾಡುತ್ತಾರೆ. ಆದರೆ ಅದನ್ನು ಸಂಸತ್ತಿನ ಒಳಗೇ ಪಾಲಿಸುವುದಿಲ್ಲ. ಅವರ ರಕ್ತದಲ್ಲೇ ಪ್ರಜಾಪ್ರಭುತ್ವವಿಲ್ಲ” ಎಂದು ಅವರು ಲೇವಡಿ ಮಾಡಿದ್ದಾರೆ. ಸಂಸತ್ತಿನಲ್ಲಿ ಎಲ್ಲ ವಿಷಯಗಳ ಬಗ್ಗೆಯೂ, ಎಲ್ಲ ಪಕ್ಷಗಳೂ ಶಾಂತಿಯುತವಾಗಿ ಚರ್ಚೆ ನಡೆಸಬೇಕು ಎಂದು ಅವರು ಹೇಳಿದರು. ಲೋಕಸಭೆ ಮತ್ತು ರಾಜ್ಯ ಸಭೆಯಲ್ಲಿ ವಿರೋಧಪಕ್ಷದ ನಾಯಕರು ಗಲಾಟೆ ಎಬ್ಬಿಸಿದ್ದನ್ನು ವಿರೋಧಿಸಿ ಅವರು ಈ ರೀತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಆರೆಸ್ಸೆಸ್ ಕುರಿತ ಬಹುಕೋಟಿ ಬಜೆಟ್ ಸಿನಿಮಾಗೆ ಕಥೆ ಬರೆಯಲಿರುವ ಬಾಹುಬಲಿಯ ಕಥೆಗಾರ!

ಮುಂದಿನ ಸುದ್ದಿ »

ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಬೌಬೌ ಪ್ರತಿಭಟನೆ ನಡೆಸಿದ ದಲಿತ ಸಂಘಟನೆಗಳು!

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×