Thursday October 12 2017

Follow on us:

Contact Us

ಆರುಷಿ ತಲ್ವಾರ್ ಕೊಲೆ ಪ್ರಕರಣ: ಆರುಷಿ ಪೋಷಕರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ನ್ಯೂಸ್ ಕನ್ನಡ ವರದಿ-(12.10.17): ದೇಶದೆಲ್ಲೆಡೆ ಗುಲ್ಲೆಬ್ಬಿಸಿದ್ದ ಅರುಷಿ ತಲ್ವಾರ್ ಕೊಲೆ ಪ್ರಕರಣದ ಕುರಿತಾದಂತೆ ಇಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದ್ದು, ಈ ಪ್ರಕರಣದಲ್ಲಿ ಅರುಷಿಯನ್ನು ಆಕೆಯ ತಂದೆತಾಯಿ ಸೇರಿ ಕೊಲೆಗೈದಿದ್ದಾರೆ ಎಂಬುವುದಕ್ಕೆ ಯಾವುದೇ ರೀತಿಯ ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಅವರನ್ನು ಖುಲಾಸೆಗೊಳಿಸಲಾಗಿದೆ ಎಂದು ನ್ಯಾಯಾಲಯವು ಹೇಳಿದೆ. ಆರುಷಿಯ ಪೋಷಕರಾದ ನೂಪುರ್ ತಲ್ವಾರ್ ಮತ್ತು ರಾಜೇಶ್ ತಲ್ವಾರ್ ಇಬ್ಬರನ್ನೂ ಸಿಬಿಐ ನ್ಯಾಯಾಲಯವು ಈ ಮೊದಲು ದೋಷಿಗಳೆಂದು ಪರಿಗಣಿಸಿತ್ತು.

2008ರ ಮೇ16ರಂದು ಆರುಷಿ ತಲ್ವಾರ್(14) ಮೃತದೇಹವು ಆಕೆಯ ಕೊಠಡಿಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಕೃತ್ಯವನ್ನು ಮನೆಕೆಲಸದವ ನಡೆಸಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಮರುದಿನ ಮನೆಕೆಲಸಕ್ಕಿದ್ದ ಹೇಮರಾಜ್ ಎಂಬಾತನೂ ಶವವಾಗಿ ಪತ್ತೆಯಾಗಿದ್ದ. ಹೇಮರಾಜ್ ಮತ್ತು ಆರುಷಿಯನ್ನು ನೋಡಲಾರದ ರೀತಿಯಲ್ಲಿ ಕಂಡುಬಂದ ಕಾರಣ ಅವರಿಬ್ಬರನ್ನೂ ಆಕೆಯ ಪೋಷಕರು ಕೊಲೆಗೈದಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಪೋಷಕರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯವು ಪ್ರಕರಣದಿಂದ ಖುಲಾಸೆಗೊಳಿಸಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

2030ರಲ್ಲಿ ಮೋದಿ ಚಂದ್ರನನ್ನು ಭೂಮಿಗೆ ತರುತ್ತಾರೆ: ರಾಹುಲ್ ಗಾಂಧಿ

ಮುಂದಿನ ಸುದ್ದಿ »

ಎರಡು ಕೋಟಿ ರೂ ವೆಚ್ಚದಲ್ಲಿ ಉಚ್ಚಿಲ-ಮುದರಂಗಡಿ ರಸ್ತೆ ದ್ವಿಪಥ; ಶೀಘ್ರದಲ್ಲಿ ಕಾಮಗಾರಿ ಪ್ರಾರಂಭ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×