Wednesday January 10 2018

Follow on us:

Contact Us

ಆಟೋದಲ್ಲಿ ಸಿಕ್ಕಿದ ಹಣದ ಚೀಲ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಸುಹೇಲ್ ಪಾಷಾ

ನ್ಯೂಸ್ ಕನ್ನಡ ಬೆಂಗಳೂರು(10-01-2018): ಪ್ರಯಾಣಿಕರೊಬ್ಬರು ಆಟೋದಲ್ಲಿ ಮರೆತುಹೋಗಿದ್ದ 2 ಲಕ್ಷ ರೂ ನಗದು ಹೊಂದಿದ್ದ ಕೈ ಚೀಲ ಹಿಂದಿರುಗಿಸಿ ಆಟೋ ಚಾಲಕರೊಬ್ಬರು ಮಾನವೀಯತೆ ಮೆರೆದಿದ್ದಾರೆ.

ಶಿವಾಜಿನಗರದ ಆಟೋ ಚಾಲಕ ಸುಹೇಲ್ ಪಾಷಾ ಎಂಬವರೇ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮರೆದ ವ್ಯಕ್ತಿ. ಸುಹೇಲ್ ಪಾಷಾ ಸ್ವತಃ ಪೊಲೀಸ್ ಆಯುಕ್ತರ ಕಛೇರಿಗೆ ಬಂದು ಹಣ ಒಪ್ಪಿಸಿರುವುದಾಗಿ ಹೇಳಲಾಗಿದೆ.

ಚರ್ಚ್‍ವೊಂದರಲ್ಲಿ ಸಿಬ್ಬಂದಿಯಾಗಿರುವ ದಿವ್ಯಶ್ರೀ ಎಂಬಾಕೆ, ಬ್ಯಾಂಕೊಂದಕ್ಕೆ ಕಟ್ಟಲು ಏಳು ಲಕ್ಷ ರೂಪಾಯಿಗಳೊಂದಿಗೆ ಸುಹೇಲ್ ಪಾಷಾರ ಆಟೋ ಮೂಲಕ ಬಂದಿದ್ದರು. ಇಳಿಯುವ ವೇಳೆ ಆತುರದಲ್ಲಿ ಎರಡು ಲಕ್ಷ ರೂಪಾಯಿಗಳನ್ನು ಹೊಂದಿದ್ದ ಚೀಲವೊಂದನ್ನು ಬಿಟ್ಟು ಹೋಗಿದ್ದರು.

ಹಣ ಕಳೆದುಕೊಂಡು ದುಖಿಃತಳಾಗಿದ್ದ ದಿವ್ಯಶ್ರೀ ಕರ್ಮಷಿಯಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನ್ನ ಆಟೋದಲ್ಲಿ ಬೃಹತ್ ಮೊತ್ತದ ನಗದು ಕಂಡಿದ್ದ ಪಾಷಾ ಕೂಡಲೇ ಪೊಲೀಸ್ ಠಾಣೆಗೆ ಹಿಂದಿರುಗಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಧನ್ಯಶ್ರೀ ಆತ್ಮಹತ್ಯೆ ಪ್ರಕರಣದಲ್ಲಿ ಶೋಭಾ ಕರಂದ್ಲಾಜೆ ಬಾಯ್ಮುಚ್ಚಿಕೊಂಡಿರುವುದೇಕೆ?

ಮುಂದಿನ ಸುದ್ದಿ »

ಹಸಿವು ತಾಳಲಾರದೆ ನಾಯಿಮರಿಯನ್ನು ನುಂಗಿದ ನಾಗರಹಾವು!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×