Tuesday October 10 2017

Follow on us:

Contact Us

ಅಯೋಧ್ಯೆಯಲ್ಲಿ ಶ್ರೀರಾಮನ ಬೃಹತ್ ವಿಗ್ರಹವನ್ನು ಸ್ಥಾಪಿಸಲಿರುವ ಯೋಗಿ ಆದಿತ್ಯನಾಥ್ ಸರಕಾರ!

ನ್ಯೂಸ್ ಕನ್ನಡ ವರದಿ-(10.10.17): ವಿಶ್ವ ಪಾರಂಪರಿಕ ತಾಣವಾದ ತಾಜ್ ಮಹಲ್ ಅನ್ನು ಉತ್ತರಪ್ರದೇಶದ ಪ್ರವಾಸಿ ತಾಣಗಳ ಪಟ್ಟಿಯಿಂದ ಕೈಬಿಟ್ಟ ಬಳಿಕ ಇದೀಗ ಯೋಗಿ ಆದಿತ್ಯನಾಥ್ ಸರಕಾರವು ಅಯೋಧ್ಯೆಯಲ್ಲಿ ಶ್ರೀರಾಮನ ಬೃಹತ್ ವಿಗ್ರಹವನ್ನು ಸ್ಥಾಪಿಸಲಿದೆ ಎಂದು ತಿಳಿದು ಬಂದಿದೆ. ಈ ವಿಗ್ರಹವು ಸುಮಾರು 100ಮೀಟರ್ ಎತ್ತರವಿರಲಿದೆ ಎನ್ನಲಾಗಿದೆ.

ಅಯೋಧ್ಯೆಯಲ್ಲಿನ ಸರಯೂ ನದೀ ತೀರದಲ್ಲಿ ಶ್ರೀರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸರಕಾರ ಉದ್ದೇಶಿಸಿರುವ ಬಗ್ಗೆ ರಾಜಭವನವು ಹೊರಡಿಸಿರುವ ಪ್ರಕಟನೆಯನ್ನು ವರದಿಗಳು ಉಲ್ಲೇಖೀಸಿವೆ. ಉತ್ತರ ಪ್ರದೇಶದ ರಾಜ್ಯಪಾಲ ರಾಮ ನಾಯಕ್‌ ಅವರಿಗೆ ರಾಜ್ಯದ ಪ್ರವಾಸೋದ್ಯಮ ಇಲಾಖೆಯು ಈ ಕುರಿತ ಪ್ರಸ್ತಾವವನ್ನು ಸಲ್ಲಿಸಿದೆ. ರಾಜ್ಯದಲ್ಲಿ ಧಾರ್ಮಿಕ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಹೇಳಿದೆ.

ಉತ್ತರ ಪ್ರದೇಶ ಪ್ರವಾಸೋದ್ಯ ಸಚಿವಾಲಯವು ಈಚೆಗೆ ಬಿಡುಗಡೆ ಮಾಡಿದ್ದ ಟೂರಿಸಂ ಬುಕ್‌ಲೆಟ್‌ನಲ್ಲಿ ವಿಶ್ವವಿಖ್ಯಾತ ತಾಜ್‌ ಮಹಲನ್ನು ಕೈಬಿಟ್ಟಿರುವುದರಿಂದ ಉಂಟಾಗಿರುವ ವ್ಯಾಪಕ ವಿವಾದಗಳ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿಯನ್ನು ಸ್ಥಾಪಿಸುವ ಸರಕಾರದ ನಿರ್ಧಾರವು ಹೊಸ ವಿವಾದವನ್ನು ಹುಟ್ಟುಹಾಕಿದಂತಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಚಪ್ಪಲಿ ಕಳೆದುಹೋಯಿತು ಎಂದು ಪೊಲೀಸರಿಗೆ ದೂರು ನೀಡಿದ ವ್ಯಕ್ತಿ

ಮುಂದಿನ ಸುದ್ದಿ »

ಹಾದಿಯಾ ತನಗಿಷ್ಟ ಬಂದವರೊಂದಿಗೆ ತೆರಳಬಹುದು: ಸುಪ್ರೀಮ್ ಕೋರ್ಟ್

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×