Tuesday January 9 2018

Follow on us:

Contact Us

ಬಂಟ್ವಾಳ: ಮನೆಗೆ ನುಗ್ಗಿ ತಾಯಿ,ಮಗಳಿಗೆ ಜೀವ ಬೆದರಿಕೆ ಹಾಕಿದ ಸಂಘಪರಿವಾರ ಕಾರ್ಯಕರ್ತರು: ಆರೋಪ

ನ್ಯೂಸ್ ಕನ್ನಡ ವರದಿ-(9.01.18): ಮೊನ್ನೆ ತಾನೇ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಮುಸ್ಲಿಮರೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದಾಳೆ ಎಂಬ ಕಾರಣಕ್ಕೆ ಧನ್ಯಶ್ರೀ ಎಂಬ ಯುವತಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ಕಿರುಕುಳ ನೀಡಿದ್ದರು. ಇದರಿಂದ ನೊಂದು ಯುವತಿಯು ಆತ್ಮಹತ್ಯೆ ಮಾಡಿಕೊಂಡಿದ್ದಳು. ಬಳಿಕ ಮಂಗಳೂರಿನಲ್ಲಿ ಎಸ್.ಎಫ್.ಐ ಸಂಘಟನೆಯ ನಾಯಕಿಯೊಬ್ಬರ ಕುರಿತು ಅಪಪ್ರಚಾರ ನಡೆಸಿದ್ದರು. ಇದೀಗ ಮುಸ್ಲಿಮರೊಂದಿಗೆ ಸ್ನೇಹ ಬೆಳಿಸಿದ್ದಾಳೆ ಎಂಬ ಕಾರಣಕ್ಕೆ ಸೀದಾ ಮನೆಗೆ ನುಗ್ಗಿದ ಸಂಗಪರಿವಾರ ಕಾರ್ಯಕರ್ತರು ತಾಯಿ ಮತ್ತು ಮಗಳಿಗೆ ಜೀವ ಬೆದರಿಕೆ ಒಡ್ಡಿರುವ ಘಟನೆಯು ಬಂಟ್ವಾಳದಲ್ಲಿ ನಡೆದಿದೆ.

ಬಂಟ್ವಾಳದ ಮೇರಮಜಲು ಎಂಬಲ್ಲಿ ಘಟನೆಯು ನಡೆದಿದ್ದು, ಯುವತಿಯು ಮುಸ್ಲಿಮರೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದಾಳೆ ಎಂಬ ಕಾರಣವನ್ನಿಟ್ಟುಕೊಂಡು ಮನೆಗೆ ದಾಳಿ ಮಾಡಿದ ನಾಲ್ವರು ದುಷ್ಕರ್ಮಿಗಳು ದಾಂಧಲೆ ಮಾಡಿದ್ದಲ್ಲದೇ ಜೀವ ಬೆದರಿಕೆಯನ್ನೂ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಬಂಟ್ವಾಳ ಪೊಲೀಸರು ನಿರಾಕರಿಸಿದ್ದು, ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಈ ಕುರಿತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಪ್ರತಿನಿತ್ಯ ಬಾಳೆ ಹಣ್ಣು ಸೇವನೆಯಿಂದ ಆಗುವ ಆರೋಗ್ಯಕರ ಪ್ರಯೋಜನವೇನು ಗೊತ್ತೇ? ಓದಿ ನೋಡಿ..

ಮುಂದಿನ ಸುದ್ದಿ »

ಈ ಬಾರಿ ಉಡುಪಿಯ ಎಲ್ಲಾ 5 ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಲಿದೆ: ಶಾಸಕ ಸುನೀಲ್ ಕುಮಾರ್

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×