Friday January 12 2018

Follow on us:

Contact Us

ಮುಖ್ಯಮಂತ್ರಿ ಸಿದ್ದರಾಮಯ್ಯನೂ ಒಬ್ಬ ಭಯೋತ್ಪಾದಕ: ಸಿ.ಟಿ.ರವಿ

ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ಚುನಾವಣೆ ಹತ್ತಿರ ಬಂದಾಗ ರಾಜಕೀಯ ನಾಯಕರು ಪರಸ್ಪರ ವಾಗ್ದಾಳಿ, ಆರೋಪ, ಪ್ರತ್ಯಾರೋಪ, ಆಕ್ರೋಶ ವ್ಯಕ್ತ ಪಡಿಸುವುದು ಸಾಮಾನ್ಯ, ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಸಿ.ಟಿ.ರವಿ, ಸಮಾಜದಲ್ಲಿ ಭಯ ಸೃಷ್ಟಿಸುವುದೇ ಭಯೋತ್ಪಾನೆ ಅಂತ ಗೃಹ ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿ, ಭಯೋತ್ಪಾದನೆ ರೀತಿಯಲ್ಲಿ ಮಾತಾನಾಡುವುದೇ ಭಯೋತ್ಪಾದನೆ ಅಂದ್ರೆ ಸಿದ್ದರಾಮಯ್ಯ ಕೂಡ ಒಬ್ಬ ಭಯೋತ್ಪಾದಕರಾಗುತ್ತಾರೆ. ಯಾಕೆಂದರೆ ಅವರ ಮಾತಿನಲ್ಲಿ ಬೆದರಿಕೆ, ದುರಹಾಂಕಾರ ಇದೆ. ನಾವು ಯಾವತ್ತು ದುರಹಾಂಕಾರ ಮಾತು ಆಗಲಿ, ಬೆದರಿಕೆ ರೀತಿ ಮಾತಾನಾಡಿಲ್ಲ’ ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹಮಂತ್ರಿ ರಾಮಲಿಂಗ ರೆಡ್ಡಿ ವಿರುದ್ಧ ಸತತ ವಾಗ್ದಾಳಿ ನಡೆಸಿದ ಸಿ.ಟಿ.ರವಿ, ‘ತಾಲಿಬಾಲ್ ಹಾಗೂ ನಕ್ಸಲ್ ಜೊತೆ ನಂಟು ಇಟ್ಟುಕೊಂಡು ಸಿದ್ದರಾಮಯ್ಯ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ಹಿಂದೂ ಯಾವತ್ತು ಉಗ್ರ ಆಗೋಕೆ ಸಾಧ್ಯವಿಲ್ಲ. ಹಿಂದೂ ಹಾಗೊಮ್ಮೆ ಹೀಗೊಮ್ಮೆ ವ್ಯಾಘ್ರವಾಗಬಹುದು ಆದ್ರೆ ಉಗ್ರ ಆಗೋಕೆ ಸಾಧ್ಯವಿಲ್ಲ, ಸತ್ಯದ ಪರ ಹೋರಾಟ ಮಾಡೋದನ್ನು ಭಯೋತ್ಪಾದನೆ ಅಂದ್ರೆ ಹೇಗೆ? ಸತ್ಯದ ಪರ ಹೋರಾಟ ಮಾಡೋದನ್ನು ಭಯೋತ್ಪಾದನೆ ಅಂತಾ ಕರೆಯೋದಕ್ಕೆ ಯಾವ ಡಿಕ್ಷನರಿ ಓದಿಕೊಂಡಿದ್ದಾರೆ ನನಗೆ ಗೊತ್ತಿಲ್ಲ’ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಜನರನ್ನು ಸೆಳೆಯಲು ಯುವತಿಯರ ಮಾದಕ ಕುಣಿತ: ಬಿಜೆಪಿಯ ನಡೆಗೆ ಸಾರ್ವಜನಿಕರ ತೀವ್ರ ಆಕ್ರೋಶ

ಮುಂದಿನ ಸುದ್ದಿ »

ವಾಟ್ಸ್ಯಾಪ್‍ ನಲ್ಲಿ ಮಹಿಳೆಗೆ,ಧರ್ಮಕ್ಕೆ ನಿಂದನೆ:ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×