Sunday November 12 2017

Follow on us:

Contact Us

ಚಿತ್ರಕೂಟ ಉಪಚುನಾವಣೆ: ಬಿಜೆಪಿಯನ್ನು ಮಣಿಸಿ ಭರ್ಜರಿ ಜಯಗಳಿಸಿದ ಕಾಂಗ್ರೆಸ್!

ನ್ಯೂಸ್ ಕನ್ನಡ ವರದಿ(12.11.2017): ಮಧ್ಯಪ್ರದೇಶದ ಚಿತ್ರಕೂಟ ಉಪಚುನಾವಣೆಯು ಬಹಳ ದಿನಗಳಿಂದ ಜನರಲ್ಲಿ ಕುತೂಹಲ ಮೂಡಿಸಿತ್ತು. ಎಲ್ಲಾ ಪಕ್ಷದ ಕಾರ್ಯಕರ್ತರು ಭರ್ಜರಿ ಪ್ರಚಾರಕ್ಕಾಗಿ ಅಖಾಡಕ್ಕೂ ಇಳಿದಿದ್ದರು. ಇದೀಗ ಉಪಚುನಾವಣೆ ನಡೆದು ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಪಕ್ಷವು ಭಾರತೀಯ ಜನತಾ ಪಕ್ಷವನ್ನು ಮಣಿಸಿ ಭರ್ಜರಿ ಜಯ ಸಾಧಿಸಿದೆ. ಮುಂದೆ ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಬರಲಿದ್ದು, ಈ ಗೆಲುವು ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಚಿತ್ರಕೂಟ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಈಬಾರಿ ಶಂಕರ್ ಲಾಲ್ ತ್ರಿಪಾಠಿ ಕಣಕ್ಕಿಳಿದಿದ್ದು, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಹಲವು ಘಟಾನುಘಟಿಗಳು ಬಂದು ಪ್ರಚಾರ ನಡೆಸಿದರೂ ಕಾಂಗ್ರೆಸ್ ಅಭ್ಯರ್ಥಿ ನೀಲಂಶು ಚತುರ್ವೇದಿ ವಿರುದ್ಧ ಒಟ್ಟು 14,333 ಮತಗಳಿಂದ ಸೋಲನ್ನಪ್ಪಿಕೊಂಡಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ನಾವು ಪ್ರಧಾನಿ ಮೋದಿಯನ್ನು ಟೀಕಿಸುತ್ತೇವೆ, ಆದರೆ ಅಗೌರವ ತೋರುವುದಿಲ್ಲ: ರಾಹುಲ್ ಗಾಂಧಿ

ಮುಂದಿನ ಸುದ್ದಿ »

ಕಣ್ಣೂರು: ಕೊಲೆ ಪ್ರಕರಣದ ಆರೋಪಿಯಾಗಿದ್ದ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ!

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×