Saturday November 11 2017

Follow on us:

Contact Us

ಯಡಿಯೂರಪ್ಪಗೆ ವಯಸ್ಸಾಗಿದೆ, ಹಾಗಾಗಿ ಏನೇನೋ ಮಾತನಾಡುತ್ತಾರೆ: ಸಿಎಂ ಸಿದ್ದರಾಮಯ್ಯ

ನ್ಯೂಸ್ ಕನ್ನಡ ವರದಿ(11.11.2017): ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಉಭಯ ಪಕ್ಷಗಳ ನಾಯಕರು ಕೆಸರೆರಚಾಟದಲ್ಲಿ ತೊಡಗಿಕೊಂಡಿದ್ದಾರೆ. ಕರ್ನಾಟಕ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರಂತೂ ಬೀದಿಜಗಳ ಆಡುತ್ತಿದ್ದಾರೆ. ಸಿದ್ದರಾಮಯ್ಯ ಓರ್ವ ನಯವಂಚಕ ವ್ಯಕ್ತಿ ಎಂದು ಪರಿವರ್ತನಾ ಯಾತ್ರೆಯಲ್ಲಿ ಯಡಿಯೂರಪ್ಪ ಹೇಳಿದ್ದು, ಈ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಗರು ಭ್ರಷ್ಟರು, ಅವರ ರೀತಿಯ ಕೊಳಕು ರಾಜಕಾರಣಿಗಳು ಎಲ್ಲು ಸಿಗಲು ಸಾಧ್ಯವಿಲ್ಲ. ಎಲ್ಲರೂ ಲೂಟಿಕೋರರು. ಯಡಿಯೂರಪ್ಪರಿಗೆ ಈಗ ವಯಸ್ಸಾಗಿದೆ. ಹಾಗಾಗಿ ಏನೇನೋ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

ನನ್ನ ಯಾವುದಾದರೂ ಒಂದು ಹಗರಣ ಸಾಬೀತು ಮಾಡಿದರೆ ರಾಜಕೀಯದಿಂದಲೇ ನಿವೃತ್ತಿಯಾಗಿಬಿಡುತ್ತೇನೆ. ಈ ಮಾತನ್ನು ಹೇಳುವುದು ಮತ್ಯಾರು ಅಲ್ಲ ಜೈಲಿಗೆ ಹೋಗಿ ಬಂದ ಯಡಿಯೂರಪ್ಪ. ಕರ್ನಾಟಕದಲ್ಲಿ ‘ಶಾ’ರ ಯಾವ ಮಂತ್ರದಂಡವೂ ನಡೆಯುವುದಿಲ್ಲ. ಮತ್ತೆ ಅಧಿಕಾರಕ್ಕೆ ಬರುವುದು ನಾವೇ’. ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕೃಷ್ಣಯ್ಯ ಶೆಟ್ಟಿ, ಜನಾರ್ದನ್ ರೆಡ್ಡಿ, ಹಾಲಪ್ಪ ,ಆನಂದ್ ಸಿಂಗ್ ಇವರೆಲ್ಲ ಜೈಲಿಗೆ ಹೋಗಿ ಬಂದವರು. ಕೆಲವು ಮಂತ್ರಿಗಳು ಬ್ಲೂ ಫಿಲ್ಮ್ ನೋಡಿ ಮಂತ್ರಿ ಸ್ಥಾನ ಕಳೆದುಕೊಂಡರು ಎಂದು ಬಿಜೆಪಿ ನಾಯಕರನ್ನು ನಿಂದಿಸಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಸರ್ಕಾರಕ್ಕೆ ಮುಸ್ಲಿಮರ ಸುನ್ನತ್ ನಿಷೇಧಿಸಲು ಸಾಧ್ಯವೇ: ಈಶ್ವರಪ್ಪ

ಮುಂದಿನ ಸುದ್ದಿ »

ಪ್ರಧಾನಿ ನರೇಂದ್ರ ಮೋದಿಗೆ ನಾಚಿಕೆಯಾಗಬೇಕು ಎಂದ ಡಿ.ವಿ ಸದಾನಂದ ಗೌಡ!

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×