Monday January 8 2018

Follow on us:

Contact Us

ಧನ್ಯಶ್ರೀ ಆತ್ಮಹತ್ಯೆ ಪ್ರಕರಣ: ಬಿಜೆಪಿ ಯುವಮೋರ್ಚಾ ಅಧ್ಯಕ್ಷನನ್ನು ಬಂಧಿಸಿದ ಎಸ್ಪಿ ಅಣ್ಣಾಮಲೈ!

ಚಿಕ್ಕಮಗಳೂರು: ಮೂಡಿಗೆರೆಯ ವಿದ್ಯಾರ್ಥಿನಿ ಧನ್ಯಶ್ರೀ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದಡಿ ಬಿಜೆಪಿ ನಗರ ಯುವಮೋರ್ಚಾದ ಅಧ್ಯಕ್ಷನನ್ನು ಬಂಧಿಸಿದ್ದು, ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

ಎಸ್ಪಿ ಅಣ್ಣಾಮಲೈ ಹೇಳಿಕೆಯಲ್ಲಿ ಈ ವಿಷಯ ತಿಳಿಸಿದ್ದು, ಆತ್ಮಹತ್ಯೆಗೂ ಮುನ್ನ ಧನ್ಯಶ್ರೀ ಡೆತ್ ನೋಟ್ ಬರೆದಿದ್ದಾರೆ. ಮನೆ ಬಳಿ ಬಂದು ಕೆಲವು ಹಿಂದೂಪರ ಸಂಘಟನೆಯವರು ಧಮ್ಕಿ ಹಾಕಿದ್ದಾರೆ. ತಾಯಿಗೂ ಧಮ್ಕಿ ಹಾಕಿ ಮುಸ್ಲಿಂ ಯುವಕನ ಜತೆ ನಿಮ್ಮ ಮಗಳು ಓಡಾಡುತ್ತಿದ್ದಾಳೆ. ಲವ್ ಜಿಹಾದ್‌ಗೆ ಅವಕಾಶ ಮಾಡಿಕೊಟ್ಟಿದ್ದೀರಿ ಎಂದು ಹೆದರಿಸಿದ್ದಾರೆ ಎಂಬುದಾಗಿ ಧನ್ಯಶ್ರೀ ಡೆತ್‌ನೋಟ್‌ನಲ್ಲಿ ಸ್ಪಷ್ಟವಾಗಿ ಬರೆದಿದ್ದಾರೆ. ಸಮಾಜದಲ್ಲಿ ಹೇಗೆ ಬದುಕಬೇಕು ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ. ಅವರ ಮನೆ ಬಳಿಗೆ ಹೋಗಿ ಧಮ್ಕಿ ಹಾಕಿದ್ದ ಐವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಅನಿಲ್ ಎಂಬಾತನನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ,ಕಾಮೆಂಟ್ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಬಿ.ಕಾಂ ವಿದ್ಯಾರ್ಥಿನಿ ಧನ್ಯಶ್ರೀ ಮುಸ್ಲಿಂ ಹುಡುಗನೊಬ್ಬನೊಂದಿಗೆ ಸ್ನೇಹ ಮಾಡಿಕೊಂಡಿದ್ದನ್ನು ಪ್ರಶ್ನಿಸಿ ಸ್ವಜಾತಿಯ ಯುವಕನೊಬ್ಬ ವಾಟ್ಸಾಪ್‌ ಮೆಸೇಜ್‌ ಮೂಲಕ ತರಾಟೆಗೆ ತೆಗೆದುಕೊಂಡಿದ್ದ. ವಿದ್ಯಾರ್ಥಿನಿಯು ಮುಸ್ಲಿಂ ಯುವಕನ ಗೆಳೆತನ ಬಯಸಿದ್ದರಲ್ಲಿ ತಪ್ಪೇನಿಲ್ಲ ಎಂದು ಪ್ರತಿಯಾಗಿ ಚಾಟ್‌ನಲ್ಲಿ ಸಮರ್ಥನೆ ಮಾಡಿಕೊಂಡಿದ್ದಾಳೆ. ಇದರಿಂದ ಹತಾಶೆಗೊಂಡ ಯುವಕ ಪಟ್ಟಣದ ಜನರಿಗೆ ಮತ್ತು ಬಜರಂಗದಳದರಿಗೆ ತಿಳಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಆಕೆ ಜತೆ ವಾಟ್ಸಾಪ್‌ನಲ್ಲಿ ಚಾಟ್‌ ಮಾಡಿದ್ದನ್ನು ಇತರೆ ವಾಟ್ಸಾಪ್‌ ಗ್ರೂಪ್‌ಗಳಲ್ಲಿ ವೈರಲ್‌ ಮಾಡಿದ್ದಾನೆ. ಪಟ್ಟಣದ ಕೆಲವು ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಗೆ ವಿಷಯ ತಿಳಿಸಿದ್ದ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಜಿಹಾದಿಗಳ ಓಲೈಕೆಗಾಗಿ ಬಿಜೆಪಿ ವಿರುದ್ಧ ಕುಮಾರಸ್ವಾಮಿ ಸುಳ್ಳಾರೋಪ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ »

ಪ್ರಥಮ ಟೆಸ್ಟ್: ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು ಕಂಡ ಭಾರತ ತಂಡ!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×