Tuesday January 10 2017

Follow on us:

Contact Us

ದಿಡ್ಡಳ್ಳಿ: ಸರಕಾರ ನುಡಿದಂತೆ ನಡೆಯಲಿದೆ-ಸಚಿವ ಎಂ.ಆರ್.ಸೀತಾರಾಂ

“ಅಲ್ಲಿ ಬೇಡ, ಇಲ್ಲಿ ಬೇಡ ಎಂದರೆ ಯಾವುದೇ ಕಾರ್ಯ ನಡೆಯಲ್ಲ”

ನ್ಯೂಸ್ ಕನ್ನಡ ವರದಿ(10.01.2017)-ಮಡಿಕೇರಿ: ದಿಡ್ಡಳ್ಳಿಯ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸರ್ಕಾರ ನುಡಿದಂತೆ ನಡೆದುಕೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಅವರು ತಿಳಿಸಿದ್ದಾರೆ.

ಕುಶಾಲನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಮಂಗಳವಾರ ಜನಪ್ರತಿನಿಧಿಗಳು, ಆದಿವಾಸಿ ಮುಖಂಡರು ಅಧಿಕಾರಿಗಳು ಮತ್ತಿತರರೊಂದಿಗೆ ನಡೆದ ಸಭೆಯಲ್ಲಿ ಸಚಿವರು ಮಾತನಾಡಿದ ಅವರು, ಈಗಾಗಲೇ ಕುಶಾಲನಗರ ಹೋಬಳಿಯ ಬಸವನಹಳ್ಳಿಯಲ್ಲಿ 6.70 ಎಕರೆಯಲ್ಲಿ 181 ನಿವೇಶನ, ರಾಂಪುರ ಗ್ರಾಮದ 10 ಎಕರೆ ಜಾಗದಲ್ಲಿ 184 ನಿವೇಶನ ಹಾಗೂ ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾಮ ವ್ಯಾಪ್ತಿಯಲ್ಲಿ 7.50 ಎಕರೆಯಲ್ಲಿ 166 ಒಟ್ಟು 531 ನಿವೇಶನಗಳನ್ನು ಲಾಟರಿ ಮೂಲಕ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಪ್ರಕಟಿಸಿದರು.

ದಿಡ್ಡಳ್ಳಿಯ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ನಿರಾಶ್ರಿತರು ಒದಗಿಸಬೇಕು. ಈ ದಾಖಲೆಗಳನ್ನು ಪರಿಶೀಲಿಸಿ ನಿಜವಾದ ಅರ್ಹ ಮೂಲ ನಿವಾಸಿ ಆದಿವಾಸಿಗಳಿಗೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಎಂ.ಆರ್.ಸೀತಾರಾಂ ಅವರು ಹೇಳಿದರು.

ಈಗಾಗಲೇ ಪಟ್ಟಿಯಲ್ಲಿ ನೀಡಲಾಗಿರುವ ಹೆಸರನ್ನು ಬದಲಾಯಿಸಬಾರದು. ಸ್ಥಳೀಯ ಅರ್ಹ ಆದಿವಾಸಿಗಳಿಗೆ ನಿವೇಶನ ಒದಗಿಸಲು ಸರ್ಕಾರ ಬದ್ಧವಾಗಿದೆ. ಆದ್ದರಿಂದ ಒಂದು ವಾರದೊಳಗೆ ಅಗತ್ಯ ದಾಖಲೆಗಳ ಪಟ್ಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬುಡಕಟ್ಟು ಸಮುದಾಯದ ಪ್ರಮುಖರಾದ ಚಂದ್ರು ಅವರು ನಿಜವಾದ ಆದಿವಾಸಿಗಳಿಗೆ ನಿವೇಶನ ಹಂಚಿಕೆ ಮಾಡಬೇಕು. ಕುಶಾಲನಗರ ಬಳಿಯ ಬಸವನಹಳ್ಳಿ ಹಾಗೂ ರಾಂಪುರದಲ್ಲಿ ಗುರುತಿಸಿರುವ ಭೂಮಿಯನ್ನು ಸೋಮವಾರಪೇಟೆ ತಾಲ್ಲೂಕಿನ ಆದಿವಾಸಿಗಳಿಗೆ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವರು ದಿಡ್ಡಳ್ಳಿಯ ನಿರಾಶ್ರಿತರು ಜಿಲ್ಲೆಯ ಮೂರು ತಾಲ್ಲೂಕಿನವರಾಗಿದ್ದಾರೆ. ಆದ್ದರಿಂದ ಎಲ್ಲಾ ಬಡ ಮೂಲನಿವಾಸಿ ಅರ್ಹ ಗಿರಿಜನರಿಗೆ ನಿವೇಶನ ಒದಗಿಸಲು ಸರ್ಕಾರ ಹಂತ ಹಂತವಾಗಿ ಕ್ರಮಕೈಗೊಳ್ಳಲಿದೆ. ಸದ್ಯ ದಿಡ್ಡಳ್ಳಿಯ ನಿರಾಶ್ರಿತರಿಗೆ ಪ್ರಥಮ ಆದ್ಯತೆಯಲ್ಲಿ ನಿವೇಶನ ಹಂಚಿಕೆ ಮಾಡಬೇಕಿದೆ. ಆ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಸಚಿವರು ಮನವಿ ಮಾಡಿದರು.

ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ದಿಡ್ಡಳ್ಳಿಯಲ್ಲಿನ ಗಿರಿಜನರು ಮೂಲತಃ ಆದಿವಾಸಿಗಳಾಗಿದ್ದು, ಇವರಿಗೆ ನಿವೇಶನ ಒದಗಿಸಬೇಕಿದೆ. ಆ ನಿಟ್ಟಿನಲ್ಲಿ ಸಹಕರಿಸಬೇಕು. ಅರಣ್ಯ ಹಕ್ಕು ಕಾಯ್ದೆಯಡಿಯು ಸಹ ಅರ್ಹರಿಗೆ ಅರಣ್ಯ ಹಕ್ಕು ಪತ್ರವನ್ನು ನೀಡಲಾಗುತ್ತದೆ. ಆ ಕಾರ್ಯವು ಎಂದಿನಂತೆ ನಡೆಯಲಿದೆ ಎಂದು ಅವರು ತಿಳಿಸಿದರು.

ಹಾಗೆಯೇ 94ಸಿ ನಡಿ ಅರ್ಜಿ ಸಲ್ಲಿಸುವವರಿಗೆ ಅದು ಸಹ ಕಾರ್ಯಗತಗೊಳ್ಳಲಿದೆ. ಯಾರೂ ಸಹ ಗೊಂದಲ ನಿರ್ಮಾಣ ಮಾಡುವುದು ಬೇಡ ಎಂದು ಅವರು ಹೇಳಿದರು.

ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಅಲ್ಲಿ ಕೊಡಿ, ಇಲ್ಲಿ ಕೊಡಿ. ಇಲ್ಲಿ ಬೇಡ, ಅಲ್ಲಿ ನೀಡಿ ಎಂದು ತಮ್ಮ ತಮ್ಮಲ್ಲಿಯೇ ಗೊಂದಲ ನಿರ್ಮಿಸಿದರೆ ಯಾವುದೇ ಕಾರ್ಯಗಳು ನಡೆಯುವುದಿಲ್ಲ ಎಚ್ಚರಿಸಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ದಿಡ್ಡಳ್ಳಿಯ ನಿರಾಶ್ರಿತ ಅರ್ಹ ಕುಟುಂಬಗಳಿಗೆ 30*30 ನಿವೇಶನ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

ಸೋಮವಾರಪೇಟೆ ತಾ.ಪಂ.ಉಪಾಧ್ಯಕ್ಷರಾದ ಅಭಿಮನ್ಯು ಕುಮಾರ್ ಅವರು ಮಾತನಾಡಿದರು. ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಪದ್ಮಿನಿ ಪೊನ್ನಪ್ಪ, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿ.ಪಂ. ಸಿಇಓ ಚಾರುಲತಾ ಸೋಮಲ್, ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಡಿವೈಎಸ್‍ಪಿ ಛಬ್ಬಿ, ಐಟಿಡಿಪಿ ಇಲಾಖಾ ಅಧಿಕಾರಿ ಪ್ರಕಾಶ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಾಯಾದೇವಿ ಗಲಗಲಿ, ಬಿಸಿಎಂ ಇಲಾಖೆ ಅಧಿಕಾರಿ ಕೆ.ವಿ.ಸುರೇಶ್ ನಾನಾ ಇಲಾಖೆ ಅಧಿಕಾರಿಗಳು ಹಾಜರಿದ್ದರು.

nkicmgkp

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಬಿಸ್ಮಿಲ್ಲಾ ಖಾನ್ ಶಹನಾಯಿ ಕಳವು: ಮೊಮ್ಮಗನ ಬಂಧನ

ಮುಂದಿನ ಸುದ್ದಿ »

ಮನಸ್ಸನ್ನು ದೊಡ್ಡದು ಮಾಡಿ ತಾಯಿ, ಪತ್ನಿ ಜೊತೆ ವಾಸ ಮಾಡಿ-ಮೋದಿಗೆ ಕೇಜ್ರಿವಾಲ್ ಟಾಂಗ್

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×