Tuesday August 8 2017

Follow on us:

Contact Us

ನಟಿಗೆ ಕಿರುಕುಳ ನೀಡಿದ ಪ್ರಕರಣ: ದಿಲೀಪ್ ಗೆ ನ್ಯಾಯಾಂಗ ಬಂಧನ ವಿಸ್ತರಣೆ

ನ್ಯೂಸ್ ಕನ್ನಡ ವರದಿ-(24.07.17): ಮಲಯಾಳಂನ ಪ್ರಸಿದ್ಧ ನಟಿಯೋರ್ವರನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ದಿಲೀಪ್ ರನ್ನು ಜುಲೈ 10ರಂದು ಕೇರಳ ಪೊಲೀಸರು ಬಂಧಿಸಿದ್ದರು. ಬಳಿಕ ಜಾಮೀನು ನೀಡುವಂತೆ ಕೋರಿ ಸ್ಥಳೀಯ ನ್ಯಾಯಾಲಯಕ್ಕೆ ದಿಲೀಪ್ ಪರ ವಕೀಲರು ಅರ್ಜಿ ಹಾಕಿದ್ದರು.

ಈ ಅರ್ಜಿಯ ಕುರಿತು ವಿಚಾರಣೆ ನಡೆಸಿದ ಅಂಗಮಾಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ದಿಲೀಪ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು, ಮಾತ್ರವಲ್ಲದೇ 10 ದಿನಗಳ ನ್ಯಾಯಾಂಗ ಬಂಧನವನ್ನೂ ವಿಸ್ತರಿಸಿತ್ತು. ಬಳಿಕ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ದಿಲೀಪ್ ಅರ್ಜಿಯನ್ನು ಹೈಕೋರ್ಟ್ ಕೂಡಾ ತಿರಿಸ್ಕರಿಸಿತ್ತು. ಇದೀಗ ನಟ ದಿಲೀಪ್ ರ ಕಸ್ಟಡಿಯನ್ನು ಆಗಸ್ಟ್ 22ರವರೆಗೆ ವಿಸ್ತರಣೆ ಮಾಡಿ ಅಂಗಮಾಲಿ ಮ್ಯಾಜಿಸ್ಟೆರಿಯಲ್ ಕೋರ್ಟ್ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಶಾಲೆಗಳಲ್ಲಿ ಯೋಗ ಕಡ್ಡಾಯಗೊಳಿಸಬೇಕೆಂದ ಅರ್ಜಿಯನ್ನು ವಜಾ ಮಾಡಿದ ಸುಪ್ರೀಂಕೋರ್ಟ್!

ಮುಂದಿನ ಸುದ್ದಿ »

ನ್ಯಾಯ ಕೊಡಿ ಎನ್ನುತ್ತಲೇ ನ್ಯಾಯಾಲಯದಲ್ಲಿ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಮುಂದಾದ ವ್ಯಕ್ತಿ!

ಸಿನೆಮಾ

  • ನಟಿ ಅಪಹರಣ ಪ್ರಕರಣ: 4ನೇ ಬಾರಿಯೂ ದಿಲೀಪ್ ಜಾಮೀನು ಅರ್ಜಿ ವಜಾ!

    September 18, 2017

    ನ್ಯೂಸ್ ಕನ್ನಡ ವರದಿ-(18.9.17): ನಟಿಯೊಬ್ಬಳ ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ಮತ್ತೆ ತಿರಸ್ಕರಿಸಿದೆ. ಜುಲೈ 10ರಂದು ಬಂಧಿತರಾಗಿದ್ದ ದಿಲೀಪ್ ಈ ಹಿಂದೆ ಜುಲೈ 24ರಂದು ಜಾಮೀನಿಗೆ ಅರ್ಜಿ ...

    Read More
  • ಅ.6: ಗಲ್ಫ್ ನಲ್ಲಿ ಮಾರ್ಚ್ 22 ಸಿನಿಮಾ ಬಿಡುಗಡೆ

    September 17, 2017

    ನ್ಯೂಸ್ ಕನ್ನಡ ವರದಿ-(17.9.17): ರಾಜ್ಯಾದ್ಯಂತ ಭಾರೀ ಸುದ್ದಿ ಮಾಡುತ್ತಿರುವ ಹಾಗು ಮಾಧ್ಯಮಗಳ ಪ್ರಶಂಶೆಯ ಸುರಿಮಳೆಗೆ ಭಾಜನವಾಗಿರುವ  ‘ಮಾರ್ಚ್ 22’  ಸಿನೆಮಾ  ದುಬೈ, ಶಾರ್ಜಾ, ಅಬುಧಾಬಿ ಸೇರಿದಂತೆ ಯುಎಇ(ಗಲ್ಫ್) ಯಾದ್ಯಂತ ಅಕ್ಟೊಬರ್ 6 ರಂದು ಬಿಡುಗಡೆಯಾಗುತ್ತಿದೆ. ಸಿನೆಮಾದ ಪ್ರಥಮ ಪ್ರದರ್ಶನದಲ್ಲಿ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×