Tuesday January 9 2018

Follow on us:

Contact Us

ದೀಪಕ್ ಹತ್ಯೆಯಲ್ಲಿ ಬಿಜೆಪಿ ಕಾರ್ಪೋರೇಟರ್ ಕೈವಾಡ: ದ.ಕ ಜಿಲ್ಲಾ ಕಾಂಗ್ರೆಸ್ ಆರೋಪ

ನ್ಯೂಸ್ ಕನ್ನಡ ವರದಿ-(9.01.18): ಮಂಗಳೂರು: ಕಾಟಿಪಳ್ಳದ ನಿವಾಸಿ ಬಿಜೆಪು ಕಾರ್ಯಕರ್ತ ದೀಪಕ್ ರಾವ್ ಹತ್ಯೆಗೆ ಬಿಜೆಪಿ ಯ ಕಾರ್ಪೋರೇಟರೊ ಒಬ್ಬರು ಸುಪಾರಿ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದ ಬೆನ್ನಲ್ಲೇ ಇದೀಗ ದ.ಕ ಜಿಲ್ಲಾ ಕಾಂಗ್ರೆಸ್ ಕೂಡ ಗಂಭೀರ ಆರೋಪ ಮಾಡಿದೆ.

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಿರುವ ಹರೀಶ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೀಪಕ್ ರಾವ್ ಹತ್ಯೆ ಅದೊಂದು ಸುಪಾರಿ ಹತ್ಯೆ ಎಂದು ಮೇಲ್ನೋಟಕ್ಕೆ ಕಂಡುಬಂದಿದ್ದು,  ಈ ಪ್ರಕರಣದಲ್ಲಿ ಬಿಜೆಪಿ ಕಾರ್ಪೋರೇಟರ್ ಒಬ್ಬರ ಭಾಗಿಯಾಗಿದ್ದಾರೆಂಬ ಶಂಕೆ ಮಾಧ್ಯಮಗಳಲ್ಲಿನ
ವರದಿಗಳಿಂದ ಮೂಡಿ ಬಂದಿದೆ.

ಬಿಜೆಪಿ ನಾಯಕರು ದೀಪಕ್ ರಾವ್ ಹತ್ಯೆಯನ್ನು ರಾಜಕೀಯವಾಗಿ ಬಳಸಿಕೊಂಡಿದ್ದಾರೆ. ಅವರ ಪ್ರಚೊದನಾ ಕಾರಿಯಿಂದಾಗಿ ಇವರ ಹತ್ಯೆ ನಡೆದಿದೆ ಎಂದು ಆರೋಪಿಸಿದರು. ದೀಪಕ್ ಹಾಗೂ ಬಶೀರ್ ಅಮಾಯಕರಾಗಿದ್ದು, ದೀಪಕ್ ಹತ್ಯೆಗೆ ಪ್ರತೀಕಾರವಾಗಿ ಬಶೀರ್ ಹತ್ಯೆ ನಡೆದಿದೆ.
ದೀಪಕ್ ಯಾವುದೇ ಸಂಘಟನೆ ಯಲ್ಲಿ ಭಾಗಿಯಾಗಿಲ್ಲ ಎಂದು ಅವರ ಪೋಷಕರು ಹೆಳಿಕೆ ನೀಡಿದ್ದಾರೆ.ಆದರೆ ಬಿಜೆಪಿಯವರು ಆತ ಹಿಂದೂ ಎನ್ನುವ ಕಾರಣಕ್ಕೆ ನಮ್ಮ ಕಾರ್ಯಕರ್ತ ಎಂದು ಹೇಳಿಕೊಂಡು ರಾಜಕೀಯ ನಡೆಸುತ್ತಿದ್ದಾರೆ.

ಇನ್ನು ಬಶೀರ್ ಅವರ ಶವಯಾತ್ರೆ ಸಂದರ್ಭದಲ್ಲಿ ಅವರ ಸಹೋದರ ನೀಡಿರುವ ಶಾಂತಿಯ ಸಂದೇಶ ಪ್ರಶಂಸಾರ್ಹ.ದ.ಕ ಜಿಲ್ಲಾ ಕಾಂಗ್ರೆಸ್ ಅವರಿಗೆ ಅಭಿನಂದನೆ ಸಲ್ಲಿಸುತ್ತದೆ ಎಂದು ತಿಳಿಸಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ರೋಹಿ ಮಿಲನ್ ಕಮಿಟಿಯಿಂದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ

ಮುಂದಿನ ಸುದ್ದಿ »

ಮೂಡಬಿದಿರೆ: ಹುಟ್ಟುಹಬ್ಬದಂದೇ ಆತ್ಮಹತ್ಯೆಗೆ ಶರಣಾದ ಆಳ್ವಾಸ್ ವಿದ್ಯಾರ್ಥಿ!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×