Wednesday January 10 2018

Follow on us:

Contact Us

ಮೊದಲು ಆರೆಸ್ಸೆಸ್ ಮತ್ತು ಬಿಜೆಪಿ ಬ್ಯಾನ್ ಮಾಡಬೇಕು, ಜಿಹಾದಿಗಳೆಂದರೆ ನೀವೇ!

ನ್ಯೂಸ್ ಕನ್ನಡ ವರದಿ-(10.01.18): ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಿಕಾಂ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಓರ್ವ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣ ಕುರಿತಂತೆ ಇಂದು ನಗರದ ಮೌರ್ಯ ಸರ್ಕಲ್ ನಲ್ಲಿ ಎನೆಸ್’ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, “ಬಿಜೆಪಿ ಮತ್ತು ಸಂಘಪರಿವಾರ ಧನ್ಯಶ್ರೀ ಆತ್ಮಹತ್ಯೆ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ದೀಪಕ್ ರಾವ್ ಹತ್ಯೆ ಬಗ್ಗೆ ಮಾತನಾಡುತ್ತೀರಾ. ಪ್ರವೀಣ್ ಪೂಜಾರಿ ಹತ್ಯೆ ಬಗ್ಗೆ ಮಾತನಾಡುತ್ತೀರಾ. ಯಾಕೆ ಧನ್ಯಶ್ರೀ ಹಿಂದೂ ಅಲ್ಲವೇ? ಎಂದು ಪ್ರಶ್ನಿಸಿದ ಅವರು ನೀವು ಜಿಹಾದಿಗಳು. ಬಿಜೆಪಿ ಮತ್ತು ಆರ್.ಎಸ್.ಎಸ್ ಬ್ಯಾನ್ ಮಾಡಬೇಕು ಎಂದು ವಾಗ್ದಾಳಿ ನಡೆಸಿದರು.

ಎನ್ ಎಸ್ ಯುಐ ರಾಜ್ಯಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ‘ಧನ್ಯಶ್ರೀ ಆತ್ಮ ಹತ್ಯೆ ಹಿಂದೆ ಸ್ಥಳೀಯ ಬಜರಂಗದಳ ಕಾರ್ಯಕರ್ತನ ಕೈವಾಡ ಇದೆ. ಆದ್ದರಿಂದ ಬಿಜೆಪಿ ನಾಯಕರು ಈ ವಿಚಾರದಲ್ಲಿ ಮಾತನಾಡುವುದಿಲ್ಲ’ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಹಿಂದೂ ಜಾಗರಣ ವೇದಿಕೆ ಮುಖಂಡನ ಹತ್ಯಾಯತ್ನ ನಾಟಕವನ್ನು ಬಯಲಿಗೆಳೆದ ಕಮಿಷನರ್!

ಮುಂದಿನ ಸುದ್ದಿ »

ಆಟೋದಲ್ಲಿ ಸಿಕ್ಕಿದ ಹಣದ ಚೀಲ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಸುಹೇಲ್ ಪಾಷಾ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×