Saturday November 11 2017

Follow on us:

Contact Us

ಪ್ರಧಾನಿ ನರೇಂದ್ರ ಮೋದಿಗೆ ನಾಚಿಕೆಯಾಗಬೇಕು ಎಂದ ಡಿ.ವಿ ಸದಾನಂದ ಗೌಡ!

ನ್ಯೂಸ್ ಕನ್ನಡ ವರದಿ(11.11.2017): ಕರ್ನಾಟಕದ ಭಾರತೀಯ ಜನತಾಪಕ್ಷಕ್ಕೆ ಈಗೀಗ ಸಮಯವೇಕೋ ಹೊಂದಾಣಿಕೆಯಾಗುತ್ತಿಲ್ಲ ಎಂದು ತೋಚುತ್ತಿದೆ. ಹೋದಲ್ಲಿ ಬಂದಲ್ಲೆಲ್ಲಾ ಫ್ಲಾಪ್ ಆಗುತ್ತಿರುವ ಬಿಜೆಪಿ ನಾಯಕರ ನವಕರ್ನಾಟಕ ಪರಿವರ್ತನಾ ಯಾತ್ರೆಗೂ ಆರಂಭದಲ್ಲೇ ವಿಘ್ನ ಬಂದಿತ್ತು. ಈಗೀಗ ಬಿಜೆಪಿ ನಾಯಕರು ಎಡವಟ್ಟು ಮಾಡಿಕೊಳ್ಳುತ್ತಿದ್ದಾರೆ. ಇಂದು ಬಂಟ್ವಾಳದಲ್ಲಿ ಬಿಜೆಪಿಯ ನವಕರ್ನಾಟಕ ಪರಿವರ್ತನಾ ಯಾತ್ರೆಯ ಸಂದರ್ಭದಲ್ಲಿ ಸ್ವರ್ತ ತಮ್ಮದೇ ಪಕ್ಷದ ಪ್ರಧಾನಿಯನ್ನು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಬಾಯ್ತಪ್ಪಿ ಹೀಯಾಳಿಸಿದ್ದಾರೆ.

ನಿನ್ನೆ ತಾನೇ ಪರಿವರ್ತನಾ ಯಾತ್ರೆಯು ಸುಳ್ಯಕ್ಕೆ ತಲುಪಿದ್ದ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಹಾಗೂ ಸಂಸದ ಶ್ರೀರಾಂಉಲು, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯು ವ್ಯಾಪಕವಾಗುತ್ತಿದೆ. ಬಿ.ಎಸ್ ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಸದಾನಂದ ಗೌಡ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುತ್ತಿದ್ದಾರೆ ಎಂದು ಬಾಯ್ತಪ್ಪಿ ಹೇಳಿದ್ದರು. ಅದೇ ರೀತಿ ಇಂದು ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸದಾನಂದ ಗೌಡ, ಪ್ರಧಾನಿ ನರೇಂದ್ರ ಮೋದಿಗೆ ನಾಚಿಕೆಯಾಗಬೇಕು ಎಂದು ಬಾಯ್ತಪ್ಪಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

news source: suvarna news

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಯಡಿಯೂರಪ್ಪಗೆ ವಯಸ್ಸಾಗಿದೆ, ಹಾಗಾಗಿ ಏನೇನೋ ಮಾತನಾಡುತ್ತಾರೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ »

ಅಕ್ಷರ ಇ-ಮ್ಯಾಗಝಿನ್ ಪತ್ರಿಕೆಯ ವತಿಯಿಂದ “ಟಿಪ್ಪು ವಿಚಾರಗೋಷ್ಠಿ” ಕಾರ್ಯಕ್ರಮ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×