Wednesday December 6 2017

Follow on us:

Contact Us

ಇವಿಎಂ ಬಳಸಿದರೆ ಚುನಾವಣೆಯನ್ನೇ ಬಹಿಷ್ಕರಿಸಲಿದೆಯೇ ಕರ್ನಾಟಕ ಕಾಂಗ್ರೆಸ್?

ನ್ಯೂಸ್ ಕನ್ನಡ-(06.12.17): ಎಲೆಕ್ಟ್ರಾನಿಕ್ ಮತಯಂತ್ರವನ್ನು ಬಳಸಿ, ಅದನ್ನು ಹ್ಯಾಕ್ ಮಾಡುವ ಮೂಲಕ ಮತಗಳೆಲ್ಲಾ ಬಿಜೆಪಿ ಪಕ್ಷದ ಪಾಲಾಗುವಂತೆ ಮಾಡಲಾಗುತ್ತಿದೆ ಎಂಬ ಆರೋಪವು ವ್ಯಾಪಕವಾಗಿ ಕೇಳಿ ಬರುತ್ತಿದೆ. ಮೊನ್ನೆ ಉತ್ತರಪ್ರದೇಶದಲ್ಲಿ ನಡೆದ ಸ್ಥಳೀಯಾಡಳಿತ ಚುನಾವಣೆಯ ಸಂದರ್ಭದಲ್ಲಿ ನಾನು ಹಾಕಿದ ಮತವೇ ನನಗೆ ಸಿಗಲಿಲ್ಲವೆಂದು ಅಭ್ಯರ್ಥಿಯೋರ್ವರು ಆರೋಪಿಸಿದ್ದರು. ಈ ನಿಟ್ಟಿನಲ್ಲಿ ಕರ್ನಾಟಕದಲ್ಲೂ ಇವಿಎಂ ದುರ್ಬಳಕೆಯಾಗುವ ಸಾಧ್ಯತೆಯಿದ್ದು, ಬಾಲೆಟ್ ಪೇಪರ್ ಬಳಸದೇ ಇವಿಎಂ ಮುಖಾಂತರ ಚುನಾವಣೆ ಪ್ರಕ್ರಿಯೆ ನಡೆಸುವುದಾದರೆ ಚುನಾವಣೆಯನ್ನು ಬಹಿಷ್ಕರಿಸಲು ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ಮುಂದಾಗಿವೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.

ಯುಪಿಎ ಮೈತ್ರಿಕೂಟದ ಹಲವು ಸದಸ್ಯರು ಮತ್ತು ಇತರ ವಿರೋಧ ಪಕ್ಷಗಳು ಒಂದಾಗಿ, ಕೇಂದ್ರ ಚುನಾವಣಾ ಆಯೋಗದ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದು, ಕಾಂಗ್ರೆಸ್ ಹೈಕಮಾಂಡಿನ ನಿರ್ಧಾರಕ್ಕೆ ಕಾಯುತ್ತಿದೆ ಎನ್ನುವ ಮಾಹಿತಿಯಿದೆ. ಇವಿಎಂ ಯಂತ್ರದಲ್ಲಿ ಯಾವುದೇ ಲೋಪದೋಷವಿಲ್ಲ ಎಂದು ಈಗಾಗಲೇ ಹಲವು ಬಾರಿ ಡೆಮೋ ನೀಡಿದ್ದ ಚುನಾವಣಾ ಆಯೋಗ, ಇದಾದ ನಂತರ ಕೂಡಾ ವಿರೋಧ ಪಕ್ಷಗಳು ತೆಗೆದಿದ್ದ ತಗಾದೆಗೆ ‘ನಿಮ್ಮ ಯಾವುದೇ ಪ್ರಶ್ನೆಗೆ ಉತ್ತರಿಸಲು ಸಿದ್ದ, ಇವಿಎಂನಲ್ಲಿನ ಲೋಪದೋಷ ತೋರಿಸಿ’ ಎಂದು ಬಹಿರಂಗ ಸವಾಲು ನೀಡಿತ್ತು. ಡಮ್ಮಿ ಇವಿಎಂ ಬಳಸಿ ಹೇಗೆಲ್ಲಾ ದುರ್ಬಳಕೆ ಮಾಡಬಹುದು ಅನ್ನೋದರ ಬಗ್ಗೆ ಆಮ್ ಆದ್ಮಿ ಪಕ್ಷ ಡೆಮೋ ನೀಡಿದ್ದ ನಂತರ ಆಯೋಗ ಈ ಕ್ರಮವನ್ನು ತೆಗೆದುಕೊಂಡಿತ್ತು.

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಅಧ್ಯಕ್ಷ ಹುದ್ದೆಗೆ ನಾಮಪತ್ರ ಸಲ್ಲಿಸುವ ವೇಳೆ ಹಾಜರಿದ್ದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಮುಂದಿನ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸುವಂತೆ ಚುನಾವಣಾ ಆಯೋಗಕ್ಕೆ ಒತ್ತಡ ಹೇರುವ ವಿಚಾರದಲ್ಲಿ ಸೋನಿಯಾ ಗಾಂಧಿಯವರಿಗೆ ಮನವರಿಕೆ ಮಾಡಿದ್ದಾರೆನ್ನುವ ಮಾಹಿತಿ ಲಭ್ಯವಾಗಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

“ಏಸು ಮತ್ತು ಪೈಗಂಬರ್ ಆಸ್ತಿತ್ವಕ್ಕೆ ದಾಖಲೆಗಳಿವೆ, ಶ್ರೀರಾಮ ಇದ್ದ ಅನ್ನುವುದಕ್ಕೆ ಸಾಕ್ಷ್ಯಗಳೇ ಇಲ್ಲ”

ಮುಂದಿನ ಸುದ್ದಿ »

ಹನುಮ ಜಯಂತಿ ಮೆರವಣಿಗೆಗೆ ಅನುಮತಿಯೇ ನೀಡಿಲ್ಲ ಎಂಬುದು ಸುಳ್ಳುಸುದ್ದಿ: ಮೈಸೂರು ಡಿಸಿ ಸ್ಪಷ್ಟನೆ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×