Thursday October 12 2017

Follow on us:

Contact Us

6 ದಿನಗಳ ಹೆಣ್ಣುಮಗುವನ್ನು ಕಲ್ಲೆಸೆದು ಕೊಂದ ಹೆತ್ತವರು!

ನ್ಯೂಸ್ ಕನ್ನಡ ವರದಿ-(12.10.17): ನಿನ್ನೆ ವಿಶ್ವದಾದ್ಯಂತ ಹೆಣ್ಣುಮಕ್ಕಳ ದಿನವನ್ನು ಆಚರಿಸಲಾಯಿತು. ಹೆಣ್ಣುಮಗುವಿನ ಮಹತ್ವದ ಕುರಿತಾದಂತೆ ಹಲವೆಡೆ ಕಾರ್ಯಕ್ರಮಗಳೂ ನಡೆದವು. ಆದರೆ ರಾಜಸ್ತಾನದಲ್ಲಿ ಕ್ರೂರ ಘಟನೆಯೊಂದು ನಡೆದಿದ್ದು, ಹುಟ್ಟಿದ ಮಗು ಹೆಣ್ಣಾದ ಕಾರಣಕ್ಕೆ ಮಗುವನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು, ಕಲ್ಲೆಸೆದು ಸ್ವತಃ ತಂದೆ ತಾಯಿಯೇ ಕೊಂದ ಹೃದಯವಿದ್ರಾವಕ ಘಟನೆ ನಡೆದಿದೆ.

ಈ ಕುರಿತಾದಂತೆ ಆರೋಪಿಗಳನ್ನು ಬಂಧಿಸಲಾಗಿದ್ದು, ವೀರಮ್ ಲಾಲ್(40) ಹಾಗೂ ಸೋರಮ್ ಬಾಯಿ(35) ಎಂದು ಗುರುತಿಸಲಾಗಿದೆ. ಸೋರಮ್ ಬಾಯಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಈ ಮುಂಚಿನ ಎಲ್ಲಾ ಐದು ಮಕ್ಕಳು ಗಂಡಾಗಿದ್ದು, ಆರನೇ ಮಗುವೂ ಗಂಡಾಗಬೇಕೆಂದೇ ನಿರೀಕ್ಷೆ ಹೊಂದಿದ್ದರು. ಆದರೆ ಹೆಣ್ಣುಮಗುವನ್ನು ಹೆತ್ತ ಕಾರಣ, ಆರನೇ ದಿನ ಆಸ್ಪತ್ರೆಯಿಂದ ಸೀದಾ ನಿರ್ಜನ ಪ್ರದೇಶಕ್ಕೆ ತೆರಳಿ ಮಗುವನ್ನು ಬಿಟ್ಟು ಕಲ್ಲೆಸೆಯತೊಡಗಿದ್ದಾರೆ. ಇದನ್ನು ಕಂಡ ಸ್ಥಳೀಯ ವ್ಯಕ್ತಿಯೋರ್ವ ಗ್ರಾಮಸ್ಥರಿಗೆ ತಿಳಿಸಿದ್ದು, ಗ್ರಾಮಸ್ಥರು ಅವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಮಂಚಿ: ಪಂಚ ವಾರ್ಷಿಕೋತ್ಸವ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಮುಂದಿನ ಸುದ್ದಿ »

ಮಾಲೆಂಗಾವ್ ಸ್ಫೋಟ ಪ್ರಕರಣ: ಆರೋಪಿ ಸಮೀರ್ ಕುಲಕರ್ಣಿಗೆ ಜಾಮೀನು

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×