Sunday December 3 2017

Follow on us:

Contact Us

ಹನುಮಂತೋತ್ಸವದಲ್ಲಿ ಭಾರೀ ಹಿಂಸಾಚಾರ: ಇಬ್ಬರು ಪೊಲೀಸರಿಗೆ ಗಾಯ!

ಮೈಸೂರು: ಮೈಸೂರಿನ ಹುಣಸೂರು ಎಂಬಲ್ಲಿ ಇಂದು ನಗರಾದ್ಯಂತ ಬೃಹತ್ ಹನುಮ ಜಯಂತಿ ಮತ್ತು ಆಂಜನೇಯ ಮೂರ್ತಿಯ ಭವ್ಯ ಮೆರವಣಿಗೆ ನಡೆಯಲಿತ್ತು. ಆದರೆ ಪೊಲೀಸರು ಇದಕ್ಕೆ ಅವಕಾಶ ಮತ್ತು ಅನುಮತಿಯನ್ನು ನೀಡಿರಲಿಲ್ಲ. ಲಘು ಲಾಠಿ ಪ್ರಹಾರ ನಡೆಸಿದ ಪೊಲೀಸರ ವಿರುದ್ಧವೇ ದಂಗೆದ್ದ ಕಾರ್ಯಕರ್ತರು ನಡೆಸಿದ ಹಿಂಸಾಚಾರದಲ್ಲಿ ಒಟ್ಟು ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಹುಣಸೂರು ಪ್ರವೇಶಿಸುವ ಮುನ್ನವೇ ಮಾಲಾಧಾರಿ ಪ್ರತಾಪ್‌ ಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್‌ ಕ್ರಮದ ಕುರಿತು ಪೊಲೀಸ್‌ ವರಿಷ್ಠಾಧಿಕಾರಿ ರವಿ.ಡಿ.ಚೆನ್ನಣ್ಣನವರ್‌ ವಿರುದ್ಧ ಪ್ರತಾಪ್‌ ಸಿಂಹ ಕಿಡಿ ಕಾರಿದರು.

ಮೆರವಣಿಗೆಗೆ ಅವಕಾಶ ನೀಡದೆ ಇದ್ದಾಗ ಉದ್ರಿಕ್ತರು ಪೊಲೀಸ್‌ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.150 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಬಿಳಿಕೆರೆ ಬಳಿ ಬ್ಯಾರಿಕೇಡ್‌ ಹಾಕಿದಾಗ ಸಂಸದ ಪ್ರತಾಪ್‌ ಸಿಂಹ ಅವರು ತೀವ್ರವಾಗಿ ಕಿಡಿ ಕಾರಿ ತಾವೇ ಕಾರು ಚಲಾಯಿಸಿ ಬ್ಯಾರಿಕೇಡ್‌ ತಳ್ಳಿಕೊಂಡು ಮುಂದಕ್ಕೆ ಸಾಗಿದ್ದಾರೆ. ಈ ಸಂಬಂಧ ಅವರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದ್ದು ಇದುವರೆಗೆ ಎಲ್ಲಿಡಲಾಗಿದೆ ಎಂದು ತಿಳಿದು ಬಂದಿಲ್ಲ.

ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಕಿಡಿ ಕಾರಿದ್ದು ಸಿದ್ದರಾಮಯ್ಯ ಅವರು ಸೇಡಿನ ರಾಜಕೀಯ ಮಾಡುತ್ತಿದ್ದು, ಪ್ರತಾಪ್‌ ಸಿಂಹ ಮತ್ತು ಕಾರ್ಯಕರ್ತರನ್ನು ಸಂಜೆಯ ಒಳಗೆ ಬಿಡುಗಡೆ ಮಾಡದಿದ್ದರೆ ನಾಳೆ ಹುಣಸೂರು ಬಂದ್‌ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಅಮೇಥಿಯಲ್ಲೇ ಸೋಲು ಕಂಡವರು, ಗುಜರಾತ್‌‌ನಲ್ಲಿ ಗೆಲ್ಲುವ ಕನಸು ಕಾಣುತ್ತಿದ್ದಾರೆ: ಮೋದಿ

ಮುಂದಿನ ಸುದ್ದಿ »

ನಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ಎಸ್ಸಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×