Tuesday February 13 2018

Follow on us:

Contact Us

ರೋಹಿತ್ ಶರ್ಮಾ ಆಕರ್ಷಕ ಶತಕ: ಸ್ಪರ್ಧಾತ್ಮಕ ಮೊತ್ತ ದಾಖಲಿಸಿದ ಭಾರತ ತಂಡ

ನ್ಯೂಸ್ ಕನ್ನಡ ವರದಿ-(13.2.18): ಪೋರ್ಟ್ ಎಲಿಜಬೆತ್: ಇಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಐದನೇ ಏಕ ದಿನ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಸೋತು ಇದೀಗ ಮೊದಲು ಬ್ಯಾಟಿಂಗ್ ನಡೆಸಿದ ಭಾರತೀಯ ಕ್ರಿಕೆಟ್ ತಂಡವು ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರ ಅಮೋಘವಾದ ಶತಕದ ಮೂಲಕ ಏಳು ವಿಕೆಟ್ ಗಳ ನಷ್ಟಕ್ಕೆ ಬರೊಬ್ಬರಿ 274 ರನ್ ಗಳ ಸ್ಪರ್ಧಾತ್ಮಕ ಮೊತ್ತವನ್ನು ಪೇರಿಸಿದೆ.

ತಂಡದ ಓಪನರ್ ಬ್ಯಾಟ್ಸ್ ಮನ್ ಗಳಾದ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಉತ್ತಮ ಪ್ರದರ್ಶನ ನೀಡಿದರು. ಇವರಿಬ್ಬರ ಜತೆಯಾಟದಲ್ಲಿ 7. 2 ಓವರ್ ಗಳಲ್ಲಿ 42 ರನ್ ಗಳನ್ನು ಒಟ್ಟುಗೂಡಿಸಿದರು.
ಇನ್ನು 126 ಎಸೆತಗಳನ್ನು ಎದುರಿಸಿದ ಹಿಟ್ ಮ್ಯಾನ್ ರೋಹಿತ್ ಶರ್ಮಾ 115 ರನ್ ಗಳಿಸುವ ಮೂಲಕ 274 ರನ್ ಗಳ ಬೃಹತ್ ಮೊತ್ತದತ್ತ ತಂಡವನ್ನು ಮುನ್ನಡೆಸುವಲ್ಲಿ ಯಶಸ್ವಿಯಾದರು.

ಇನ್ನು 23 ಎಸೆತಗಳನ್ನು ಎದುರಿಸಿದ ಶಿಖರ್ ಧವನ್ ಎಂಟು ಬೌಂಡರಿಗಳಿಂದ 34 ರನ್ ಪೇರಿಸಿದರು. ತಂಡದ ನಾಯಕ ವಿರಾಟ್ ಕೊಹ್ಲಿ 54 ಎಸೆತಗಳಲ್ಲಿ 34 ರನ್ ಗಳಿಸಿಕೊಂಡರೆ, ಅಜಿಂಕ್ಯ ರಹಾನೆ 18 ಎಸೆತಗಳಲ್ಲಿ 8 ರನ್ ಗಳಿಸಿ ರನೌಟ್ ಆದರು. ಶ್ರೇಯಸ್ ಅಯ್ಯರ್ 30 ರನ್ ಗಳಿಸಿದರೆ ಉಳಿದ ಆಟಗಾರರು ಗಮನಾರ್ಹ ಪ್ರದರ್ಶನವನ್ನು ನೀಡಲಿಲ್ಲ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಭಯೋತ್ಪಾದಕರ ದಾಳಿಗೆ ಬಲಿಯಾಗಿ ಹುತಾತ್ಮರಾದ ಯೋಧ ಮುಹಮ್ಮದ್ ಅಶ್ರಫ್ ಮತ್ತು ಮುಹಮ್ಮದ್ ಇಕ್ಬಾಲ್

ಮುಂದಿನ ಸುದ್ದಿ »

ರೇಣುಕಾ ಚೌಧರಿ ಪರವಾಗಿ ಮೋದಿ ವಿರುದ್ಧ ಧ್ವನಿ ಎತ್ತಿದ್ದ ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ!

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×