Saturday August 12 2017

Follow on us:

Contact Us

ಆಸ್ಪತ್ರೆಯಲ್ಲಿ ಮಕ್ಕಳು ಮೃತಪಟ್ಟಿದ್ದು ದುರಂತವಲ್ಲ, ಅದೊಂದು ಸಾಮೂಹಿಕ ಹತ್ಯಾಕಾಂಡ: ಕೈಲಾಶ್ ಸತ್ಯಾರ್ಥಿ

ನ್ಯೂಸ್ ಕನ್ನಡ ವರದಿ-(12.08.17): ನಿನ್ನೆ ಉತ್ತರಪ್ರದೇಶದ ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜಿನಲ್ಲಿ ಆಕ್ಸಿಜನ್ ಸಮರ್ಪಕವಾಗಿ ಪೂರೈಕೆಯಾಗದ ಕಾರಣ ಆಸ್ಪತ್ರೆಯಲ್ಲಿ ದಾಖಲಾಗಿದ್ದ 30 ಮಕ್ಕಳು ಮೃತಪಟ್ಟಿದ್ದರು. ಈ ಕುರಿತು ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿದ ನೊಬೆಲ್ ಪ್ರಶಸ್ತಿ ವಿಜೇತ ಸಾಹಿತಿ ಕೈಲಾಶ್ ಸತ್ಯಾರ್ಥಿ, ಆಸ್ಪತ್ರೆಯಲ್ಲಿ ಮಕ್ಕಳು ಮೃತಪಟ್ಟಿದ್ದು ದುರಂತವಲ್ಲ, ಅದೊಂದು ಸಾಮೂಹಿಕ ಹತ್ಯಾಕಾಂಡ ಎಂದಿದ್ದಾರೆ.

ಯೋಗಿ ಆದಿತ್ಯನಾಥ್ ರವರೇ, ವೈದ್ಯಕೀಯ ಕ್ಷೇತ್ರದಲ್ಲಾಗುತ್ತಿರುವ ಅನಾಚರಗಳನ್ನು ತಡೆಗಟ್ಟಲು ತಾವು ಹಸ್ತಕ್ಷೇಪ ನಡೆಸದಿರುವುದರ ಫಲಿತಾಂಶವೇ ಇದು ಎಂದಿದ್ದಾರೆ. ಈ ಘಟನೆಯು ಇದೀಗ ದೇಶದಾದ್ಯಂತ ಸಂಚಲನ ಮೂಡಿಸಿದೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಕುರಿತಾದಂತೆ ಸಮರ್ಪಕ ರೀತಿಯಲ್ಲಿ ತನಿಖೆ ನಡೆಸಿ, ಈ ದುರಂತಕ್ಕೆ ಕಾರಣರಾದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಬಾಲಿವುಡ್ ಗೆ ದುಲ್ಕರ್ ಸಲ್ಮಾನ್: ಇವರೊಂದಿಗೆ ನಟಿಸುತ್ತಿರುವ ಬಾಲಿವುಡ್ ತಾರೆ ಯಾರು ಗೊತ್ತೇ?

ಮುಂದಿನ ಸುದ್ದಿ »

ಸುರತ್ಕಲ್: ಗುಂಪು ಹಿಂಸಾ ಹತ್ಯೆಯ ವಿರುದ್ಧ ಬೃಹತ್ ಸಮಾವೇಶ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×