Sunday November 12 2017

Follow on us:

Contact Us

ಮೂಡಬಿದಿರೆ ಕಂಬಳದಲ್ಲಿ ಪ್ರಾಣಿಹಿಂಸೆ ಮಾಡಲಾಗಿದೆಯೆಂದು ಸುಪ್ರೀಮ್ ಗೆ ದೂರು ನೀಡಲಿರುವ ಪೆಟಾ!

ನ್ಯೂಸ್ ಕನ್ನಡ ವರದಿ(12.11.2017): ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳದ ಕುರಿತಾದಂತಹ ಚರ್ಚೆಗಳು ನಡೆಯುತ್ತಲೇ ಇವೆ. ಕಂಬಳದಲ್ಲಿ ಪ್ರಾಣಿ ಹಿಂಸೆ ಮಾಡಲಾಗುತ್ತಿದೆ ಎಂದು ಪ್ರಾಣಿ ದಯಾ ಸಂಘದವರು ಸುಪ್ರೀಮ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರೂ, ಕಂಬಳದ ಆಚಾರಗಳ ಕುರಿತು ನ್ಯಾಯಾಲಯಕ್ಕೆ ಮನವರಿಕೆಯಾಗಿ ಬಳಿಕ ಕಂಬಳಕ್ಕೆ ತಡೆಯಾಜ್ಞೆ ತರಲು ಸಾಧ್‍ಯವಿಲ್ಲ ಎಂದು ಸುಪ್ರೀಮ್ ಕೋರ್ಟ್ ಹೇಳಿತ್ತು. ಇದೀಗ ಮತ್ತೆ ಪ್ರಾಣಿ ಹಿಂಸೆಯ ತಗಾದೆ ತೆಗೆದಿರುವ ಪ್ರಾಣಿ ದಯಾ ಸಂಘವು ಮೂಡಬಿದಿರೆಯಲ್ಲಿ ನಡೆದ ಕಂಬಳದಲ್ಲಿ ಪ್ರಾಣಿ ಹಿಂಸೆ ಮಾಡಲಾಗಿದೆ ಎಂದು ದೂರು ನೀಡಲಿದೆ ಎಂದು ತಿಳಿದು ಬಂದಿದೆ.

ನಾಳೆ ಸೋಮವಾರ ಸುಪ್ರೀಂ ಕೋರ್ಟ್‌ಗೆ ಕೋಣಗಳಿಗೆ ಹಿಂಸೆ ನೀಡಿದ ಬಗೆಗಿನ ಸಾಕ್ಷ್ಯ ಸಮೇತ ದೂರು ನೀಡುವುದಾಗಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಕಂಬಳದಲ್ಲಿ ಪೇಟಾದ ಹಲವು ಕಾರ್ಯಕರ್ತರು ರಹಸ್ಯ ಕ್ಯಾಮರಾಗಳನ್ನು ಬಳಸಿ ಫೋಟೋಗಳು ಮತ್ತು ವಿಡಿಯೋಗಳನ್ನು ಸೆರೆ ಹಿಡಿದಿದ್ದು, ಅದರಲ್ಲಿ ಕೆಲವೆಡೆ ಕೋಣಗಳು ಬಿದ್ದಿರುವುದು, ಹೊಡೆದಿರುವುದು ಕಂಡು ಬಂದಿದೆ ಎನ್ನಲಾಗಿದೆ. ಕಂಬಳದಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 137 ಜೊತೆ ಕೋಣಗಳು ಸ್ಪರ್ಧೆಗಿಳಿದಿದ್ದವು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ನಾನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವುದು ಖಚಿತ: ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸ್ಪಷ್ಟನೆ

ಮುಂದಿನ ಸುದ್ದಿ »

ನಾವು ಪ್ರಧಾನಿ ಮೋದಿಯನ್ನು ಟೀಕಿಸುತ್ತೇವೆ, ಆದರೆ ಅಗೌರವ ತೋರುವುದಿಲ್ಲ: ರಾಹುಲ್ ಗಾಂಧಿ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×