Thursday January 11 2018

Follow on us:

Contact Us

ಕರ್ನಾಟಕದಲ್ಲಿ ಪಾಪ್ಯುಲರ್ ಫ್ರಂಟ್ ನಿಷೇಧಿಸುವ ಪ್ರಶ್ನೆಯೇ ಇಲ್ಲ: ಕೆ.ಸಿ ವೇಣುಗೋಪಾಲ್

ನ್ಯೂಸ್ ಕನ್ನಡ ವರದಿ-(11.01.18): ವಿಜಯಪುರ: ರಾಜ್ಯದಲ್ಲಿ ಬಿಜೆಪಿ ನಾಯಕರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿಸಬೇಕೆಂದು ರಾಜ್ಯ ಸರಕಾರವನ್ನು ಒತ್ತಾಯಿಸುತ್ತಿದ್ದು, ಸಂಘಟನೆಯನ್ನು ನಿಷೇಧಿಸುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ಕೆ.ಸಿ ವೇಣುಗೋಪಾಲ್ ಅವರು ಸ್ಪಷ್ಟ ಪಡಿಸಿದರು.

ಇನ್ನು ಈ ವಿಚಾರಕ್ಕೆ ಸಂಬಂಧಿಸಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪಿಎಫ್ ಐ ಸಂಘಟನೆಯ ವಿರುದ್ಧ ಆರೋಪ ಸಾಬೀತುಗೊಳಿಸುವ ಯಾವುದೇ ದಾಖಲೆ ಗಳು ಇಲ್ಲ. ಆದ್ದರಿಂದ ನಾವು ಕೇಂದ್ರಕ್ಕೆ ಸಂಘಟನೆ ನಿಷೇಧದ ಬಗ್ಗೆ ಶಿಫಾರಸ್ಸು ಮಾಡುವುದಿಲ್ಲ ಎಂದು ಹೇಳಿದ್ದರು. ಇದೀಗ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಕೂಡ ಇದಕ್ಕೆ ಪ್ರತಿಕ್ರಿಯಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಅವರು ‘ಕರಾವಳಿ ಭಾಗದಲ್ಲಿ ನಡೆದ ಹಿಂಸಾಚಾರದಲ್ಲಿ ಬಿಜೆಪಿ ಕೈವಾಡ ಇರುವುದು ಸ್ಪಷ್ಟವಾಗಿ ಬೆಳಕಿಗೆ ಬಂದಿದೆ. ಅವರು ಅಪರಾಧಿ ಕೃತ್ಯಗಳಿಗೆ ಪ್ರಚೋದಿಸುತ್ತಿದ್ದಾರೆ. ಅವರು ಅಪರಾಧಿ ರಾಜಕೀಯದಿಂದ ಹೊರಬರಲಿ’ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಅವರು ವಿಜಯಪುರದ ಕಾರ್ಯಾಕರ್ತರ ಹಾಗೂ ಶಾಸಕರ ಸಭೆಗೆ ನಿನ್ನೆ ತಡರಾತ್ರಿ ನಗರಕ್ಕೆ ಆಗಮಿಸಿದ್ದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ನಾವು ಹಿಂದೂ, ಮುಸ್ಲಿಮ್ ಸಂಘಟನೆ ಅಂಥ ನೋಡುವುದಿಲ್ಲ, ನನಗೆಲ್ಲರೂ ಒಂದೇ: ಎಸ್ಪಿ ಅಣ್ಣಾಮಲೈ

ಮುಂದಿನ ಸುದ್ದಿ »

“ಬಿಜೆಪಿ ಮತ್ತು ಆರೆಸ್ಸೆಸ್ ಉಗ್ರಗಾಮಿಗಳೆಂದು ನಾನು ಹೇಳಿದ್ದು ಬೇರೆ ಅರ್ಥದಲ್ಲಿ”

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×