Tuesday November 14 2017

Follow on us:

Contact Us

ಕೇರಳ ಆರೆಸ್ಸೆಸ್ ಕಾರ್ಯಕರ್ತನ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ನ್ಯೂಸ್ ಕನ್ನಡ ವರದಿ(14.11.2017): ಮೊನ್ನೆ ತಾನೇ ಕೇರಳದ ದೇವಳ ನಗರಿ ಗುರುವಾಯೂರ್ ನಲ್ಲಿ ಕೊಲೆ ಅಪರಾಧಿಯಾಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ ಕಾರ್ಯಕರ್ತನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೈಲಿನಿಂದ ಊರಿಗೆ ಬಂದಿದ್ದ ಅನಂದು ಎಂಬಾತ ಬೈಕ್ ನಲ್ಲಿ ತನ್ನ ಸ್ನೇಹಿತನೊಂದಿಗೆ ತೆರಳುತ್ತಿದ್ದ ಸಂದರ್ಭ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿ, ಫೈಜ್ ಹಾಗೂ ಜಿತೇಶ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆಯಾದ ಅನಂದು ರಾಷ್ಟ್ರೀಯ ಸವಯಂಸೇವಕ ಸಂಘದಲ್ಲಿ ಸಕ್ರಿಯನಾಗಿದ್ದು, ಈ ಹಿಂದೆ ಸಿಪಿಎಂ ಪಕ್ಷದ ಕಾರ್ಯಕರ್ತ ಖಾಸಿಮ್ ಎಂಬಾತನ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಎನ್ನಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಮೈಸೂರು ಸಮೀಪ ಅಪಘಾತ: ಉಳ್ಳಾಲ ಮೂಲದ ಒಂದೇ ಕುಟುಂಬದ ಮೂವರು ಮೃತ್ಯು

ಮುಂದಿನ ಸುದ್ದಿ »

ರಾಮಜನ್ಮಭೂಮಿಯನ್ನು ಬಿಟ್ಟು ಬೇರೆ ಎಲ್ಲಿ ಬೇಕಾದರೂ ಮಸೀದಿ ಕಟ್ಟಿ: ಸುಬ್ರಮಣಿಯನ್ ಸ್ವಾಮಿ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×