Thursday December 7 2017

Follow on us:

Contact Us

ಕ್ಯಾನ್ಸರ್ ನಿಂದ ಬಳಲುತ್ತಿರುವ ಅಭಿಮಾನಿಯ ಕೊನೆಯ ಆಸೆ ಈಡೇರಿಸಿ ಮನಗೆದ್ದ ಕಿಚ್ಚ!

ನ್ಯೂಸ್ ಕನ್ನಡ ವರದಿ: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ತೆರೆ ಮೇಲೆ ಮಾತ್ರ ಹೀರೋ ಅಲ್ಲ. ತೆರೆಯ ಹಿಂದೆಯೂ ಕೂಡ ಹೀರೋ ಎಂಬುದನ್ನು ಕಿಚ್ಚ ಸಾಬೀತು ಮಾಡಿದ್ದಾರೆ. ಸಾವಿನ ಅಂಚಿನಲ್ಲಿರುವ ಅಭಿಮಾನಿಯೊಬ್ಬರ ಕೊನೆಯ ಆಸೆಯನ್ನು ಸುದೀಪ್ ಈಡೇರಿಸಿದ್ದಾರೆ. ಕಿಚ್ಚನ ಅಭಿಮಾನಿ ವಿನುತಾ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ಉಲ್ಬಣಗೊಂಡು ನಾಲ್ಕನೆಯ ಹಂತ ತಲುಪಿದೆ. ವೈದ್ಯರು ವಿನುತಾ ಬದುಕುಳಿಯುವ ಸಾಧ್ಯತೆ ತುಂಬಾ ಕಡಿಮೆ ಎಂದು ತಿಳಿಸಿದ್ದಾರೆ.

ಸಾವಿನಂಚಿನಲ್ಲಿರುವ ವಿನುತಾ ಸುದೀಪ್ ಅವರ ದೊಡ್ಡ ಅಭಿಮಾನಿ, ಅವರ ಕೊನೆಯ ಆಸೆ ಏನು ಎಂದು ಕೇಳಿದಾಗ, ಒಮ್ಮೆ ತಮ್ಮ ಮೆಚ್ಚಿನ ನಟನನ್ನು ನೋಡಬೇಕು ಎಂಬ ಆಸೆಯನ್ನು ಹೇಳಿಕೊಂಡಿದ್ದಾರೆ. ವಿನುತಾರ ಕೊನೆಯ ಆಸೆಯ ಬಗ್ಗೆ ಕಿಚ್ಚಾ ಸುದೀಪ್ ಸೇನಾ ಸಮಿತಿಯು (KSSS) ನಟ ಸುದೀಪ್ ಅವರಿಗೆ ಹೇಳಿತ್ತು. ವಿಷಯ ತಿಳಿದ ನಂತರ ಸುದೀಪ್ ವಿನುತಾ ಕೊನೆಯಾಸೆಯಂತೆ ಅವರನ್ನು ಭೇಟಿ ಮಾಡಿದ್ದು, ಅವರ ಜೊತೆ ಮಾತನಾಡುತ್ತಾ ಸಮಯ ಕಳೆದಿದ್ದಾರೆ. ಈ ಭೇಟಿಯ ವಿವರ ಫೋಟೋ ಸಹಿತ ವೈರಲಾಗಿದ್ದು ಕಿಚ್ಚ ಎಲ್ಲರ ಮನಗೆದ್ದಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಬ್ರೇಕ್ ಫಾಸ್ಟ್ ಮಿಸ್ ಮಾಡ್ತೀರಾ? ನಿಮಗೆ ಅಪಾಯ ತಪ್ಪಿದ್ದಲ್ಲ.. ಇದನ್ನು ಓದಿ

ಮುಂದಿನ ಸುದ್ದಿ »

ತನ್ನ ಮಗಳ ಬಗ್ಗೆ ಟ್ರೋಲ್ ಮಾಡಿದವರಿಗೆ ಟ್ವಿಟ್ಟರ್ ನಲ್ಲಿ ಖಡಕ್ ಉತ್ತರ ನೀಡಿದ ಅಭಿಷೇಕ್ ಬಚ್ಚನ್ !

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×