Thursday October 19 2017

Follow on us:

Contact Us

ಕೋಲ್ಕತ್ತ: ಎಲ್’ಐಸಿ ಕಚೇರಿಯ ಕಟ್ಟಡದಲ್ಲಿ ಭೀಕರ ಬೆಂಕಿ ಅನಾಹುತ!

ಕೋಲ್ಕತ್ತ: ಇಲ್ಲಿನ ಜವಾಹರ ಲಾಲ್‌ ನೆಹರು ರಸ್ತೆಯಲ್ಲಿನ ಜೀವ ವಿಮಾ ನಿಗಮದ(ಎಲ್‌ಐಸಿ) ಕಟ್ಟಡದಲ್ಲಿ ಗುರುವಾರ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಅವಘಡ ಸುದ್ದಿ ತಿಳಿಯುತ್ತಿದ್ದಂತೆ 10 ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕಾಗಮಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

19 ಮಹಡಿಗಳ ಜೀವನ ಸುಧಾ ಕಟ್ಟಡದಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ 16ನೇ ಮಹಡಿಯಲ್ಲಿರುವ ಎಸ್ ಬಿಐ ಬ್ಯಾಂಕ್ ನ ಗ್ಲೋಬಲ್ ಮಾರ್ಕೆಟ್ ಕಚೇರಿಯ ಸರ್ವರ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ರಮೇಣ ಬೆಂಕಿಯ ತೀವ್ರತೆ ವ್ಯಾಪಕವಾಗಿದೆ. ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಮೂಲಗಳ ಪ್ರಕಾರ ಸರ್ವರ್ ರೂಂಮಿಗೆ ಸೀಮಿತವಾಗಿದ್ದ ಬೆಂಕಿ ಬಳಿಕ ತನ್ನ ತೀವ್ರತೆಯನ್ನು ಹೆಚ್ಚಿಸಿಕೊಂಡು ಕಟ್ಟಡದ ಇತರೆ ಕೊಠಡಿಗಳಿಗೂ ಹಬ್ಬಿದೆ. ಪರಿಣಾಮ ಕಟ್ಟಡಗಳಲ್ಲಿದ್ದ ಮಹತ್ವದ ಕಟ್ಟಡಗಳು ಸುಟ್ಟುಕುರಕಲಾಗಿವೆ. ಅಗ್ನಿ ಅವಘಡದಲ್ಲಿ ಯಾವುದೇ ರೀತಿಯ ಸಾವು-ನೋವು ಸಂಭವಿಸಿದ ಕುರಿತು ವರದಿಯಾಗಿಲ್ಲ. ಕಟ್ಟಡದಲ್ಲಿ ಇತರೆ ಕಾರ್ಮಿಕರು ಸಿಲುಕಿದ್ದಾರೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಪಲಿಮಾರು: ಪರಿಶಿಷ್ಟ ಪಂಗಡದ ಮನೆಯಲ್ಲಿ ಸರ್ವಧರ್ಮೀಯರಿಂದ ದೀಪಾವಳಿ ಆಚರಣೆ

ಮುಂದಿನ ಸುದ್ದಿ »

ಬಾಬರೀ ಮಸೀದಿಗೆ ಆದ ಪರಿಸ್ಥಿತಿ ತಾಜ್ ಮಹಲ್ ಗೂ ಎದುರಾಗಲಿದೆ: ಅಜಂ ಖಾನ್

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×