Tuesday February 13 2018

Follow on us:

Contact Us

ಕಣ್ಣೂರು: ಯುವ ಕಾಂಗ್ರೆಸ್ ಮುಖಂಡ ಶುಹೈಬ್ ಬರ್ಬರ ಹತ್ಯೆ!

ನ್ಯೂಸ್ ಕನ್ನಡ ವರದಿ-(13.2.18): ಕಣ್ಣೂರು: ನಿರಂತರವಾಗಿ ರಾಜಕೀಯ ಹತ್ಯೆಗಳ ಸುದ್ದಿಯಲ್ಲಿರುವ ಕೇರಳದ ಕಣ್ಣೂರಿನಲ್ಲಿ ಮತ್ತೆ ಲಾಂಗು, ಮಚ್ಚು ಸುದ್ದಿ ಮಾಡಿದೆ. ಅಲ್ಲಿನ ಮಟ್ಟನ್ನೂರು ಎಂಬಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳ ತಂಡವೊಂದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಮಟ್ಟನ್ನೂರಿನ ಯುವ ಕಾಂಗ್ರೆಸ್ ಬ್ಲಾಕ್ ಕಾರ್ಯದರ್ಶಿಯಾಗಿರುವ ಶುಹೈಬ್ (30) ಎಂಬವರೇ ದುಷ್ಕರ್ಮಿಗಳಿಂದ ಹತ್ಯೆಗೀಡಾದವರು. ನಿನ್ನೆ ಮಟ್ಟನ್ನೂರಿನ ರಸ್ತೆ ಬದಿಯಲ್ಲಿರುವ ಗೂಡಂಗಡಿಯೊಂದರಲ್ಲಿ ತನ್ನ ಸ್ನೇಹಿತರೊಂದಿಗೆ ಚಹಾ ಕುಡಿಯುತ್ತಿದ್ದ ಸಂದರ್ಭದಲ್ಲಿ ವ್ಯಾನ್ ಒಂದರಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಶುಹೈಬ್ ಅವರ ಮೇಲೆ ಬಾಂಬ್ ಎಸೆದು ಬಳಿಕ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.

ಈ ವೇಳೆ ಶುಹೈಬ್ ಅವರ ಜೊತೆಗಿದ್ದ ನಾಲ್ವರು ಸ್ನೇಹಿತರ ಮೇಲೂ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ ಇದರಿಂದ ಇಬ್ಬರು ಗಂಭೀರ ಗಾಯಗೊಂಡಿದ್ದು, ರಿಯಾಝ್ (28) ನೌಷಾದ್ (29) ಎಂಬವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಕೆಲ ದಿನಗಳ ಹಿಂದೆ ಅಲ್ಲಿನ ಎಡನ್ನೂರಿನಲ್ಲಿ ಎಸ್.ಎಫ್ ಐ ಮತ್ತು ಕೇರಳ ಕಾಂಗ್ರೆಸ್ ನ ವಿದ್ಯಾರ್ಥಿ ಸಂಘಟನೆಯಾಗಿರುವ ಕೆ.ಎಸ್.ಯು ನಡುವೆ ಘರ್ಷಣೆ ನಡೆದಿತ್ತು. ಇದರಿಂದಲೇ ಪ್ರತೀಕಾರವಾಗಿ ಶುಹೈಬ್ ಹತ್ಯೆ ನಡೆಯಲಾಗಿದೆ ಎಂದು ಆರೋಪ ಕೇಳಿ ಬರುತ್ತಿದೆ

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಮಾಂಸ ತಿಂದು ನರಸಿಂಹ ಸ್ವಾಮಿ ದರ್ಶನ, ಹಿಂದೂಗಳ ಭಾವನೆಗೆ ರಾಹುಲ್ ಧಕ್ಕೆ!: ಯಡ್ಡಿ ಆರೋಪ

ಮುಂದಿನ ಸುದ್ದಿ »

ಚುನಾವಣೆ ಬಂದಾಗ ಬಿಜೆಪಿಗೆ ಮೀನುಗಾರರ ಹಾಗೂ ಹಿಂದೂಗಳ ನೆನಪಾಗುತ್ತದೆ: ಪ್ರಮೋದ್ ಮಧ್ವರಾಜ್

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×