Monday March 12 2018

Follow on us:

Contact Us

ಮಂಗಳೂರು ಪಬ್ ದಾಳಿ ಪ್ರಕರಣ: ಎಲ್ಲಾ ಆರೋಪಿಗಳು ಖುಲಾಸೆ!

ನ್ಯೂಸ್ ಕನ್ನಡ ವರದಿ-(12.3.18): 2009ರ ಸಂದರ್ಭದಲ್ಲಿ ಮಂಗಳೂರಿನ ಬಲ್ಮಠದಲ್ಲಿದ್ದ ಅಮ್ನೇಸಿಯಾ ಲಾಂಜ್ ಪಬ್ ಗೆ ಶ್ರೀರಾಮಸೇನೆ ಮತ್ತು ಸಂಘಪರಿವಾರ ಸಂಘಟನೆಗಳು ದಾಳಿ ನಡೆಸಿ ಅದರಲ್ಲಿದ್ದ ಯುವಕ ಮತ್ತು ಯುವತಿಯರಿಗೆ ಹಲ್ಲೆ ನಡೆಸಿದ್ದರು. ಈ ಪ್ರಕರಣವು ರಾಷ್ಟ್ರಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಧಿಸಿದಂತೆ ಎಲ್ಲಾ ಆರೋಪಿಗಳನ್ನು ನ್ಯಾಯಾಲಯವು ಖುಲಾಸೆ ಮಾಡಿದೆ ಎಂದು ತಿಳಿದು ಬಂದಿದೆ. ಈ ಕುರಿತು ವಿಚಾರಣೆ ನಡೆಸಿದ ದಕ್ಷಿಣಕನ್ನಡ 3ನೇ ಜಿಲ್ಲಾ ಸೆಷನ್ಸ್ ನ್ಯಾಯಾಲಯವು 26 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿರುವ ಕಾರಣ ಖುಲಾಸೆ ಮಾಡಿತು. ಈ ಪ್ರಕರಣದಲ್ಲಿ ಒಟ್ಟು 30 ಮಂದಿ ಆರೋಪಿಗಳಿದ್ದು, ಇದರಲ್ಲಿ 25 ಮಂದಿಯನ್ನು ಖುಲಾಸೆಗೊಳಿಸಲಾಗಿದ್ದು, ಮೂವರು ವಿದೇಶದಲ್ಲಿದ್ದಾರೆ. ಹಾಗೂ ಇನ್ನುಳಿದ ಇಬ್ಬರು ಆರೋಪಿಗಳು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಈ ಮೂಲಕ ಇದೀಗ ಪಬ್ ದಾಳಿ ಪ್ರಕರಣವು ಇತ್ಯರ್ಥವಾಗಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ನೇಪಾಳದಲ್ಲಿ ಪತನವಾದ ಬಾಂಗ್ಲಾದೇಶದ ವಿಮಾನ: 78 ಮಂದಿ ಸಾವಿನ ಶಂಕೆ!

ಮುಂದಿನ ಸುದ್ದಿ »

ರೈತರ ಬೇಡಿಕೆಗಳಿಗೆ ಒಪ್ಪಿದ ಮಹಾರಾಷ್ಟ್ರ ಸರಕಾರ: ಪ್ರತಿಭಟನೆ ವಾಪಸ್!

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×