Sunday February 11 2018

Follow on us:

Contact Us

ಅಬುದಾಬಿಯಲ್ಲಿನ ಪ್ರಥಮ ಹಿಂದೂ ದೇವಾಲಯದ ಶಂಕುಸ್ಥಾಪನೆಗೆ ಸಾಕ್ಷಿಯಾದ ಪ್ರಧಾನಿ ಮೋದಿ!

ನ್ಯೂಸ್ ಕನ್ನಡ ವರದಿ-(11.2.18): ಯುನೈಟೆಡ್ ಅರಬ್ ಎಮಿರೇಟ್ಸ್ ನ ಅಬುದಾಬಿಯಲ್ಲಿ ದೇಶದ ಪ್ರಥಮ ಹಿಂದೂ ದೇವಾಲಯವು ನಿರ್ಮಾಣವಾಗಲಿದ್ದು, ಯುಎಇ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ದೇವಾಲಯದ ಶಂಕು ಸ್ಥಾಪನೆ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಈ ಕುರಿತು ಟ್ವಿಟ್ಟರ್ ನಲ್ಲಿ ಫೋಟೊ ಮತ್ತು ಮಾಹಿತಿಯನ್ನು ಪ್ರಕಟಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ.

ಇಂದು ದುಬೈಯಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಸ್ವಾಮಿನಾರಾಯಣ ದೇವಾಲಯದ ಶಂಕುಸ್ಥಾಪನೆಗೆ ಸಾಕ್ಷಿಯಾದರು. ದುಬೈ ಮತ್ತು ಅಬುಧಾಬಿ ಹೆದ್ದಾರಿಯ ಪಕ್ಕದಲ್ಲಿ ಈ ದೇವಸ್ಥಾನವು ನಿರ್ಮಾಣವಾಗಲಿದ್ದು, ಇದು ಉಭಯ ದೇಶಗಳ ನಡುವಿನ ಭಾಂದವ್ಯ, ಸಾಮರಸ್ಯ ಮತ್ತು ಸಹಿಷ್ಣುತೆಯ ಪ್ರತೀಕವಾಗಲಿದೆ ಎಂದು ರವೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕಾಪು: ಹಾರೆಯಿಂದ ಬಡಿದು ಕಾರ್ಮಿಕನ ಬರ್ಬರ ಕೊಲೆ!

ಮುಂದಿನ ಸುದ್ದಿ »

ಸಿದ್ದರಾಮಯ್ಯನಷ್ಟು ಪುಕ್ಕಲು ವ್ಯಕ್ತಿ ಇನ್ನೊಬ್ಬನಿಲ್ಲ!: ಪ್ರತಾಪ್ ಸಿಂಹ

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×