Sunday December 3 2017

Follow on us:

Contact Us

ಬುಲೆಟ್ ಟ್ರೈನ್ ಅನ್ನು ವಿರೋಧಿಸುವವರೇ, ನೀವು ಎತ್ತಿನಗಾಡಿಯಲ್ಲಿ ಹೋಗಿ: ಪ್ರಧಾನಿ ಮೋದಿ

ನ್ಯೂಸ್ ಕನ್ನಡ ವರದಿ-(03.12.17): ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರವು ಜಪಾನ್ ಜೊತೆಗೂಡಿ ಭಾರತದಲ್ಲಿ ಬುಲೆಟ್ ಟ್ರೈನ್ ಅನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದ್ದು, ವಿರೋಧ ಪಕ್ಷವಾದ ಕಾಂಗ್ರೆಸ್ ಸೇರಿದಂತೆ ಹಲವರು ಈ ಕುರಿತು ಸರಕಾರವನ್ನು ಟೀಕಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ಬುಲೆಟ್ ಟ್ರೈನ್ ಯೋಜನೆಯ ಕುರಿತು ಸರಕಾರವನ್ನು ಟೀಕಿಸುವವರು ಎತ್ತಿನಗಾಡಿಯಲ್ಲಿ ಹೋಗಬಹುದಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಗುಜರಾತ್ ನ ನರ್ಮದಾ ನದಿ ತೀರದಲ್ಲಿ ನಡೆದ ಚುನಾವಣಾ ಪ್ರಚಾರ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬುಲೆಟ್ ಟ್ರೈನ್ ಅನ್ನು ವಿರೋಧಿಸುವವರು ಎತ್ತಿನಗಾಡಿಯಲ್ಲಿ ತೆರಳಬಹುದು. ಇದಕ್ಕೆ ನಮ್ಮ ಯಾವುದೇ ಅಭ್ಯಂತರವಿಲ್ಲ. ಕಾಂಗ್ರೆಸ್ ಸರಕಾರಕ್ಕೆ ಈ ಉತ್ತಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗದ ಕಾರಣದಿಂದಾಗಿ ಈಗ ವಿರೋಧ ವ್ಯಕ್ತಪಡಿಸುತ್ತಿದೆ. ಬುಲೆಟ್ ಟ್ರೈನ್ ಕಾಮಗಾರಿಯು ಪ್ರಾರಂಭವಾಗದರೆ ಹಲಾರು ಉದ್ಯೋಗವಕಾಶಗಳು ತೆರೆಯುತ್ತವೆ. ಅದಕ್ಕೆ ಬೇಕಾದ ಸಾಮಗ್ರಿಗಳನ್ನು ಮತ್ತು ಕೆಲಸಗಾರರನ್ನು ಭಾರತದಿಂದಲೇ ವ್ಯವಸ್ಥೆ ಮಾಡಲಾಗುತ್ತದೆಯೇ ಹೊರತು ಜಪಾನ್ ನಿಂದಲ್ಲ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ನಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ಎಸ್ಸಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ

ಮುಂದಿನ ಸುದ್ದಿ »

ನೂರಾರು ಕನಸಿನೊಂದಿಗೆ ಮೊದಲ ರಾತ್ರಿಗೆ ತಯಾರಾಗಿದ್ದ ಯುವತಿ.. ಆದರೆ ಗಂಡ ಮಾಡಿದ್ದೇನು ಗೊತ್ತೇ..?

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×