Sunday September 17 2017

Follow on us:

Contact Us

ದುಬೈ: ಈಜುಕೊಳದಲ್ಲಿ ಮುಳುಗಿ ಕಾರವಾರ ಮೂಲದ ಯುವಕನ ಆಘಾತಕಾರಿ ಸಾವು!

ಕಾರವಾರ ನ್ಯೂಸ್ ವರದಿ: ಕಾರವಾರದ ಸಮೀಪದ ಸವರೊಪೋಯಿ ಸದಾಶಿವಘಡ್ ನಿವಾಸಿ ನಜೀರ್ ಸೈಯದ್ ರವರ ಪುತ್ರ ಮುಬಶ್ಶಿರ್ ಸೈಯದ್ ನಿನ್ನೆ ರಾತ್ರಿ ಸಂಯುಕ್ತ ಅರಬ್ ಸಂಸ್ಥಾನದ(ಯು.ಎ.ಇ) ಉಮ್ಮುಲ್ಕುಯ್ನ್ ಎಂಬಲ್ಲಿ ಈಜುಕೊಳದಲ್ಲಿ ಆಕಸ್ಮಿಕ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ದುಬೈ ವಿಮಾನ ನಿಲ್ದಾಣದ ಡ್ಯೂಟಿ ಫ್ರೀ ಉದ್ಯೋಗಿಯಾಗಿದ್ದ ಮುಬಶ್ಶಿರ್ ಸೈಯದ್ ನಿನ್ನೆ ಸಂಸ್ಥೆಯ ಸಹೋದ್ಯೋಗಿಗಳೊಂದಿಗೆ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದರು ಆ ಸಂದರ್ಭದಲ್ಲಿ ಈ ಆಘಾತಕಾರಿ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮೃತ ಮುಬಶ್ಶಿರ್ ಮಡದಿ ಕೇವಲ 40ದಿನದ ಮುಂಚೆ ಮಗುವಿಗೆ ಜನ್ಮ ನೀಡಿದ್ದರು, ಇಂದು ಅವರ ಮನೆಯಲ್ಲಿ ಸಂಭ್ರಮ ಆಚರಿಸುವವರಿದ್ದರು ಆದರೆ ಈ ಆಘಾತಕಾರಿ ಸುದ್ದಿ ತಿಳಿದು ಕುಟುಂಬ ಸದಸ್ಯರ ಸ್ನೇಹಿತರ ರೋಧನ ಮುಗಿಲು ಮುಟ್ಟಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಬ್ರಹ್ಮ ಬೈದರ್ಕಳ ಗರಡಿಗೆ ನುಗ್ಗಿದ ಕಳ್ಳರು: ನಗದು ಕಳವು

ಮುಂದಿನ ಸುದ್ದಿ »

ಆಸ್ಟ್ರೇಲಿಯಾ ತಂಡಕ್ಕೆ 282 ರನ್ ಗಳ ಗುರಿ ನೀಡಿದ ಭಾರತ ತಂಡ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×