Thursday January 11 2018

Follow on us:

Contact Us

ತಾಕತ್ತಿದ್ದರೆ ಆರೆಸ್ಸೆಸ್, ಬಜರಂಗದಳ, ಶ್ರೀರಾಮಸೇನೆಯನ್ನು ನಿಷೇಧಿಸಲಿ: ಮುತಾಲಿಕ್ ಚಾಲೆಂಜ್!

ನ್ಯೂಸ್ ಕನ್ನಡ ವರದಿ-(11.01.18): ಚಿಕ್ಕಮಗಳೂರು: ರಾಜ್ಯದಲ್ಲಿ ಪಿಎಫ್ ಐ ನಿಷೇಧಿಸಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸಿದ್ದು, ಅದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ನ ಕೆಲವು ನಾಯಕರು ಆರ್.ಎಸ್ ಎಸ್ , ಬಜರಂಗದಳ , ಶ್ರೀರಾಮ ಸೇನೆಯನ್ನು ಬ್ಯಾನ್ ಮಾಡಬೇಕೆಂಬ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಮುತಾಲಿಕ್, ರಾಜ್ಯ ಸರಕಾರಕ್ಕೆ ಸವಾಲು ಹಾಕಿದ್ದಾರೆ.

ಸುದ್ದಿಗರರೊಂದಿಗೆ ಮಾತನಾಡಿದ ಮುತಾಲಿಕ್, ‘ಸಿದ್ದರಾಮಯ್ಯನವರು ಮುಸ್ಲಿಮರ ಓಲೈಕೆ ಮಾಡುತ್ತಿದ್ದಾರೆ. ಅಲ್ಪ ಸಂಖ್ಯಾತರ ಮತಗಳಿಗಾಗಿ ಈ ರೀತಿಯ ಹೇಳಿಕೆಯನ್ನು ನೀಡುತ್ತಿದ್ದಾರೆ. ಪಿಎಫ್ ಐ 21 ಜಿಲ್ಲೆಗಳಲ್ಲಿ ಕಾರ್ಯಚರಿಸುತ್ತಿದ್ದು, ಏಳು ಕೊಲೆ ಪ್ರಕರಣದಲ್ಲಿ ಸಂಘಟನೆಯ ಹೆಸರು ಇದೆ. ಆದ್ದರಿಂದ ಪಿಎಫ್ ಐ ನಿಷೇಧಿಸಬೇಕೇ ಹೊರತು ಆರ್.ಎಸ್.ಎಸ್, ಬಜರಂಗದಳ , ಶ್ರೀರಾಮ ಸೇನೆಯನ್ನಲ್ಲ’ . ಇದೇ ವೇಳೆ “ನೀವು ತಾಕತ್ತಿದ್ದರೆ ನಿಷೇಧಿಸಿ” ಎಂದು ಸವಾಲು ಹಾಕಿದರು.

ಇನ್ನು ‘ಹಿಂದೂ ಉಗ್ರಗಾಮಿಗಳು ಎಂದಿರುವ ಮುಖ್ಯಮಂತ್ರಿ ಅವರ ಹೇಳಿಕೆ ಬಾಲಿಶವಾದದ್ದು, ಮತ್ತು ಅವರು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಮುಸ್ಲಿಮರನ್ನು ಓಲೈಸುವ ಕಾಂಗ್ರೆಸ್ ಇಂದು ಮೂಲೆ ಗುಂಪಾಗಿದೆ. ಸಿದ್ದರಾಮಯ್ಯನವರ ಇಂತಹ ಹೇಳಿಕೆಗಳಿಂದ ಅವರು ಅಪಹಾಸ್ಯಕ್ಕೀಡಾಗಿದ್ದಾರೆ’ ಎಂದು ಹೇಳಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನರನ್ನು ಸ್ವಾವಲಂಬನೆಯತ್ತ ಮುನ್ನಡೆಸುತ್ತಿದೆ-ಸುರೇಶ್ ಶೆಟ್ಟಿ

ಮುಂದಿನ ಸುದ್ದಿ »

ಮುಖ್ಯಮಂತ್ರಿ ಸಿದ್ದರಾಮಯ್ಯನೂ ಒಬ್ಬ ಭಯೋತ್ಪಾದಕ: ಸಿ.ಟಿ.ರವಿ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×